ಅಪಘಾತದಲ್ಲಿ ಪೇದೆ ಸಾವು

ಕೊಕಟನೂರ: ಬೆಂಗಳೂರು ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದ ಅಥಣಿ ತಾಲೂಕಿನ ಕೊಡಗಾನೂರ ಗ್ರಾಮದ ಯುವಕ ಶುಕ್ರವಾರ ಬೈಕ್‌ನಲ್ಲಿ ಹೋಗುವಾಗ ನಿಂತ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೊಡಗಾನೂರ ಗ್ರಾಮದ ಕೃಷ್ಣಾ ಸೈದು ಸೂರಗೊಂಡ(27) ಮೃತ ಪೇದೆ. ಇವರು ಚಿಕ್ಕಬಳ್ಳಾಪುರದಲ್ಲಿರುವ ಸ್ನೇಹಿತನ ಮನೆಯಿಂದ ದ್ವಿಚಕ್ರ ವಾಹನದಲ್ಲಿ ಹುಳಿಮಾವು ಕಡೆಗೆ ಬರುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ. ಇವರ ಪಾರ್ಥಿವ ಶರೀರವನ್ನು ಶನಿವಾರ ಗ್ರಾಮಕ್ಕೆ ತಂದು ಅಂತ್ಯಕ್ರಿಯೆ ನೆರವೇರಿಸಲಾಯಿತು. ಮೃತರಿಗೆ ತಂದೆ, ತಾಯಿ, ಸಹೋದರ, ಸಹೋದರಿಯರು ಹಾಗೂ ಬಂಧು ಬಳಗವಿದೆ. ಚಿಕ್ಕಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.