ಸಿಇಟಿ ಪರೀಕ್ಷೆ, ನಿಷೇಧಾಜ್ಞೆ ಜಾರಿ

ಬೆಳಗಾವಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ನಗರದ 5 ಪರೀಕ್ಷಾ ಕೇಂದ್ರಗಳಲ್ಲಿ ಶನಿವಾರ ಹಾಗೂ ಭಾನುವಾರ ಎಂ.ಸಿ.ಎ, ಎಂಬಿಎ, ಎಂಟೆಕ್ ಮತ್ತು ಲ್ಯಾಟರಲ್ ಎಂಟ್ರಿ ಡಿಪ್ಲೋಮಾ ಪ್ರವೇಶಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆ ಜರುಲಿದೆ.

ಆ ಹಿನ್ನೆಲೆ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಪರೀಕ್ಷಾ ಕೇಂದ್ರದ ಸುತ್ತ 200 ಮೀ. ಪ್ರದೇಶವನ್ನು 144ರನ್ವಯ ನಿಷೇಧಿತ ಪ್ರದೇಶವೆಂದು ಘೋಷಿಸಿ ಬೆಳಗಾವಿ ತಾಲೂಕು ಕಾರ್ಯನಿರ್ವಾಹಕ ದಂಡಾಧಿಕಾರಿ ಹಾಗೂ ತಹಸೀಲ್ದಾರ್ ಮಂಜುಳಾ ನಾಯಕ ಆದೇಶ ಹೊರಡಿಸಿದ್ದಾರೆ.

ಪರೀಕ್ಷಾ ಕೇಂದ್ರಗಳು: ಆರ್.ಪಿ.ಡಿ ಪದವಿ ಪೂರ್ವ ಕಾಲೇಜು, ಗೋಗಟೆ ಪದವಿ ಪೂರ್ವ ಕಾಲೇಜು, ಮರಾಠಾ ಮಂಡಳ ಪದವಿ ಪೂರ್ವ ಕಾಲೇಜು, ಜೆ.ಎ.ಸವದತ್ತಿ ಪದವಿ ಪೂರ್ವ ಕಾಲೇಜು ಹಾಗೂ ಇಸ್ಲಾಮಿಯಾ ಪದವಿ ಪೂರ್ವ ಕಾಲೇಜುಗಳಲ್ಲಿ ಪರೀಕ್ಷೆ ನಡೆಯಲಿವೆ.