More

    ಬೆಳಗಾವಿ ಜಿಲ್ಲೆಯ 3630 ಜನರ ಮೇಲೆ ನಿಗಾ

    ಬೆಳಗಾವಿ: ರಾಜ್ಯದೆಲ್ಲೆಡೆ ಕರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾಡಳಿತ ಸುಮಾರು 3630 ಜನರ ಮೇಲೆ ಸಂಪೂರ್ಣ ನಿಗಾವಹಿಸಿದೆ. ಅಲ್ಲದೆ 984 ಜನರ ಗಂಟಲು ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದೆ.

    ದೆಹಲಿಯ ತಬ್ಲಿಘಿ ಜಮಾತ್ ಕೇಂದ್ರದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿ ಬೆಳಗಾವಿ ಜಿಲ್ಲೆಗೆ ಆಗಮಿಸಿರುವವರು ಹಾಗೂ ಅವರೊಂದಿಗೆ ಪ್ರಾಥಮಿಕ ಮತ್ತು ದ್ವಿತೀಯ ಹಂತದ ಸಂಪರ್ಕ ಹೊಂದಿರುವವರಲ್ಲಿ ಕರೊನಾ ವೈರಸ್ ದೃಢಪಟ್ಟಿದೆ. ಹಾಗಾಗಿ ಸೋಂಕಿತರು ವಾಸಿಸುತ್ತಿರುವ ಪ್ರದೇಶಗಳಲ್ಲಿ ವಿಶೇಷ ನಿಗಾ ವಹಿಸಿದೆ. ಜತೆಗೆ ವೈರಸ್ ಲಕ್ಷಣಗಳು ಕಂಡುಬರುವವರನ್ನು ಕ್ವಾರಂಟೈನ್‌ನಲ್ಲಿ ಇಡಲಾಗುತ್ತಿದೆ.

    ಈಗಾಗಲೇ ಸೋಂಕಿತರಲ್ಲಿ 6 ಜನರು ಗುಣಮುಖರಾಗಿ ಮನೆಗೆ ಮರಳಿದ್ದು, ಇನ್ನೂ 47 ಜನ ಆಸ್ಪತ್ರೆಯಲ್ಲಿದ್ದಾರೆ. 1450 ಜನರು 28 ದಿನಗಳ ಕ್ವಾರಂಟೈನ್ ಪೂರ್ಣಗೊಳಿಸಿದ್ದಾರೆ. ಕರೊನಾ ಸೋಂಕಿತರ ಸಂಬಂಧಿಕರನ್ನು ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts