ರಾಜ್ಯಮಟ್ಟದ ಅತ್ಯುತ್ತಮ ‘ಜಿಲ್ಲಾ ಚುನಾವಣಾಧಿಕಾರಿ’ ಪ್ರಶಸ್ತಿಗೆ ಆಯ್ಕೆಯಾದ ಬೆಳಗಾವಿ ಜಿಲ್ಲಾಧಿಕಾರಿ

blank

ಬೆಳಗಾವಿ: ಕೇಂದ್ರ ಚುನಾವಣಾ ಆಯೋಗದ ವತಿಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಕೊಡಮಾಡುವ ಅತ್ಯುತ್ತಮ “ಜಿಲ್ಲಾ ಚುನಾವಣಾಧಿಕಾರಿ” ಪ್ರಶಸ್ತಿಗೆ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಭಾಜನರಾಗಿದ್ದಾರೆ.

ಬೆಂಗಳೂರಿನ ಸರ್ ಪುಟ್ಟಣ್ಣ ಚೆಟ್ಟಿ ಟೌನ್ ಹಾಲ್​ನಲ್ಲಿ ಜ.25 ರಂದು ಮಧ್ಯಾಹ್ನ 1 ಗಂಟೆಗೆ ನಡೆಯಲಿರುವ “ರಾಷ್ಟ್ರೀಯ ಮತದಾರರ ದಿನಾಚರಣೆ” ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಶಸ್ತಿಯನ್ನು ಪ್ರದಾನ‌ ಮಾಡಲಿದ್ದಾರೆ.

ಮತದಾರರ ನೋಂದಣಿ, ಪರಿಷ್ಕರಣೆ ಸೇರಿದಂತೆ ಒಟ್ಟಾರೆ ಚುನಾವಣಾ ಕಾರ್ಯವನ್ನು ಅತ್ಯುತ್ತಮವಾಗಿ ಕಾರ್ಯನಿರ್ವಹಣೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

ಇದೇ ರೀತಿ ತುಮಕೂರು, ಯಾದಗಿರಿ ಮತ್ತು ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೂ ಪ್ರಶಸ್ತಿ ನೀಡಲಾಗುತ್ತಿದೆ. ಇದಲ್ಲದೇ ವಿವಿಧ ಜಿಲ್ಲೆಗಳ ಮತದಾರರ ನೋಂದಣಾಧಿಕಾರಿಗಳು, ಸಹಾಯಕ ನೋಂದಣಾಧಿಕಾರಿಗಳು, ಬೂತ್ ಮಟ್ಟದ ಅಧಿಕಾರಿಗಳು, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಚುನಾವಣಾ ಶಾಖೆಯ ತಾಂತ್ರಿಕ ಸಿಬ್ಬಂದಿಗೂ ಪ್ರತ್ಯೇಕ ವಿಭಾಗಗಳಲ್ಲಿ ಪ್ರಶಸ್ತಿ ಘೋಷಿಸಲಾಗಿದೆ ಎಂದು ಚುನಾವಣಾ ಆಯೋಗ ಅಧಿಕಾರಿಗಳು ತಿಳಿಸಿದ್ದಾರೆ.

Share This Article

ಭಾರತದ ನೋಟಿನಲ್ಲಿರುವ ಮಹಾತ್ಮ ಗಾಂಧಿಜಿ ಅವರ ಫೋಟೋ ಕ್ಲಿಕ್ಕಿಸಿದ್ದು ಯಾವಾಗ & ಎಲ್ಲಿ?; ಇಲ್ಲಿದೆ ಸಂಪೂರ್ಣ ಮಾಹಿತಿ | Information

ಭಾರತದ ನೋಟಿನಲ್ಲಿ ಮಹಾತ್ಮ ಗಾಂಧಿ ಅವರ ಫೋಟೋವನ್ನು ನೀವು ನೋಡಿರಬಹುದು. ಆದರೆ ನೋಟಿನ ಮೇಲೆ ನಗುತ್ತಿರುವ…

ಇಬ್ಬನಿಯಿಂದ ಚಳಿಗಾಲದಲ್ಲಿ ತುಳಸಿ ಗಿಡ ಹಾಳಾಗುತ್ತಿದೆಯೇ?; ಆರೈಕೆಗಾಗಿ ಇಲ್ಲಿದೆ ಸಿಂಪಲ್​ ಟ್ರಿಕ್​​ | Health Tips

ತುಳಸಿಯು ಔಷಧೀಯ ಸಸ್ಯವಾಗಿರುವುದರ ಜತೆಗೆ ಧಾರ್ಮಿಕ ನಂಬಿಕೆಗಳನ್ನೂ ಹೊಂದಿದೆ. ಈ ಸಸ್ಯವನ್ನು ಹಿಂದೂ ಧರ್ಮದಲ್ಲಿ ಅತ್ಯಂತ…

ಬಿಪಿ ಹೆಚ್ಚಾಗಲು ಈ ಆಹಾರ ಪದಾರ್ಥಗಳು ಕಾರಣವೇ; ತಜ್ಞರು ಹೇಳಿದ್ದೇನು? | Health Tips

ನೂಡಲ್ಸ್, ಪಾಪಡ್, ಉಪ್ಪಿನಕಾಯಿ, ಸಾಸ್ ಮತ್ತು ನಮ್ಕೀನ್ ಬಹುತೇಕ ಈ ಎಲ್ಲಾ ಆಹಾರ ಪದಾರ್ಥಗಳು ಪ್ರತಿಯೊಬ್ಬರ…