25.8 C
Bangalore
Monday, December 9, 2019

ಸ್ವಾತಂತ್ರ್ಯ ಉತ್ಸವಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಿ

Latest News

ಅತಂತ್ರದಿಂದ ಸುತಂತ್ರದೆಡೆಗೆ ಬಿಎಸ್​ವೈ ಸರ್ಕಾರ : 2018 ಮತ್ತು 19ರ ವಿಧಾನಸಭೆ ಸದಸ್ಯ ಬಲ ಬದಲಾವಣೆಯ ಚಿತ್ರಣ ಇಲ್ಲಿದೆ..

ಬೆಂಗಳೂರು: ಕಳೆದ ವಿಧಾನಸಭೆಯಲ್ಲಿ ಅತಂತ್ರ ಜನಾದೇಶ ಬಂದ ಕಾರಣ ಒಂದೂವರೆ ವರ್ಷ ಕಾಲ ರಾಜ್ಯವನ್ನು ರಾಜಕೀಯ ಅಸ್ಥಿರತೆ ಕಾಡಿತ್ತು. ಇದಕ್ಕೆ ಪರಿಹಾರ ಕಾಣಲು...

ಚಿತ್ರದುರ್ಗ,ಕಾಡಾನೆಗೆ ಡಾಂಟಿಂಗ್

ಚಿತ್ರದುರ್ಗ: ಕೊನೆಗೂ ಡಾಂಟಿಂಗ್ ಆದ ಕಾಡಾನೆ. ಜೋಗಿಮಟ್ಟಿ ಅರಣ್ಯದಲ್ಲಿ ಮೂರ್ನಾಲ್ಕು ದಿನಗಳಿಂದ ಬೀಡುಬಿಟ್ಟಿದ್ದ ಸಲಗ. ಅಭಿಮನ್ಯು ನೇತೃತ್ವದಲ್ಲಿ ಕಾರ್ಯಾಚರಣೆ. ನಂದಿಪುರ ವಡಗಟ್ಟೆ ಅರಣ್ಯದಲ್ಲಿ ಅರವಳಿಕೆ ಕೊಟ್ಟು ಹಗ್ಗ...

ಬೈ ಎಲೆಕ್ಷನ್​ ರಿಸಲ್ಟ್​| ಶಿವಾಜಿನಗರ ‘ಕೈ’ ಪಾಲಿಗೆ; ರಿಜ್ವಾನ್​ ಅರ್ಷಾದ್​ಗೆ 13,520ಮತಗಳ ಅಂತರದಿಂದ ಗೆಲುವು

ಬೆಂಗಳೂರು: ಶಿವಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ರಿಜ್ವಾನ್​ ಅರ್ಷದ್​ 49,887 ಮತ ಗಳಿಸಿ, ಸಮೀಪದ ಸ್ಪರ್ಧಿ ಬಿಜೆಪಿಯ ಎಂ. ಶರವಣ ವಿರುದ್ಧ 13520 ಮತಗಳ...

ಕೊಟ್ಟ ಮಾತು ಉಳಿಸಿಕೊಂಡ ಸವದಿ

ಐಗಳಿ: ಅಥಣಿ ವಿಧಾನಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ ಕುಮಠಳ್ಳಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆ ಗ್ರಾಮದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ...

ಅರಟಾಳದಲ್ಲಿ ಸಂಭ್ರಮಾಚರಣೆ

ಅರಟಾಳ: ಬಿಜೆಪಿ ಸರ್ಕಾರದಿಂದ ತಾಲೂಕಿನಲ್ಲಿ ಹಲಾವಾರು ಅಭಿವೃದ್ಧಿ ಕೆಲಸಗಳಾಗಿವೆ. ಡಿಸಿಎಂ ಲಕ್ಷ್ಮಣ ಸವದಿ ಅವರು ಮತಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಉಪಚುನಾವಣೆಯಲ್ಲಿ ಲಕ್ಷ್ಮಣ ಸವದಿ ಪ್ರಭಾವ...

ಬೆಳಗಾವಿ: ಆಗಸ್ಟ್ 15ರಂದು ಜರುಗುವ 71ನೇ ಸ್ವಾತಂತ್ರ್ಯ ಉತ್ಸವವನ್ನು ಸಡಗರ, ಸಂಭ್ರಮದಿಂದ ಆಚರಿಸಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿಯಾವುಲ್ಲಾ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಸ್ವಾತಂತ್ರ್ಯ ಉತ್ಸವದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಆ.15ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ಸ್ವಾತಂತ್ರ್ಯ ಉತ್ಸವ ಆಚರಿಸಲಾಗುವುದು. ಅಂದು ಬೆಳಗ್ಗೆ 9 ಗಂಟೆಗೆ ಸಚಿವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಾರ್ವಜನಿಕರು, ಹಿರಿಯ ನಾಗರಿಕರು, ವಿದ್ಯಾರ್ಥಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಪಾಲ್ಗೊಳ್ಳಲಿದ್ದಾರೆ. ಹಾಗಾಗಿ ಸಮಾರಂಭ ನಡೆಯುವ ಸ್ಥಳದಲ್ಲಿ ಮೂಲಸೌಕರ್ಯ ಕಲ್ಪಿಸಬೇಕು. ವೇದಿಕೆ ಸಿದ್ಧತೆ, ಗಣ್ಯರು ಹಾಗೂ ನಾಗರಿಕರಿಗೆ ಆಸನ ವ್ಯವಸ್ಥೆ, ಕುಡಿಯುವ ನೀರು, ಶೌಚಗೃಹ, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಪಥಸಂಚಲನದಲ್ಲಿ ಭಾಗವಹಿಸುವವರಿಗೆ ಉಪಾಹಾರ ವ್ಯವಸ್ಥೆ ಮಾಡುವಂತೆ ಲೋಕೋಪಯೋಗಿ, ಮಹಾನಗರ ಪಾಲಿಕೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಸ್ವಾತಂತ್ರೃ ದಿನಾಚರಣೆಯಂದು ಎಲ್ಲ ಸರ್ಕಾರಿ ಕಟ್ಟಡಗಳಿಗೆ ದೀಪಾಲಂಕಾರ, ಪ್ರಮುಖ ಸ್ಥಳಗಳಲ್ಲಿ ತಳಿರು-ತೋರಣ ಕಟ್ಟಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಖಾಸಗಿ ವಾಣಿಜ್ಯ ಸಂಕೀರ್ಣಗಳು, ಶೈಕ್ಷಣಿಕ ಸಂಸ್ಥೆಗಳು ಕೂಡ ಆ. 14 ಮತ್ತು 15ರಂದು ಕಟ್ಟಡಗಳಿಗೆ ವಿಶೇಷ ದೀಪಾಲಂಕಾರ ಮಾಡಬೇಕು. ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮಹಾನಗರ ಪಾಲಿಕೆಯ ಆಯುಕ್ತರಿಗೆ ನಿರ್ದೇಶನ ನೀಡಿದರು. ಸ್ವಾತಂತ್ರ್ಯ ಉತ್ಸವದ ಅಂಗವಾಗಿ ಆಸ್ಪತ್ರೆಯಲ್ಲಿನ ರೋಗಿಗಳು ಹಾಗೂ ವಸತಿ ನಿಲಯದಲ್ಲಿರುವ ನಿರ್ಗತಿಕ ಮಕ್ಕಳಿಗೆ ಹಣ್ಣು-ಹಂಪಲು ಹಾಗೂ ಸಿಹಿ ವಿತರಣೆ ಮಾಡಲಾಗುವುದು. ಇದಕ್ಕೆ ಸಮಿತಿಯನ್ನು ರಚಿಸಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಸ್ವಾತಂತ್ರ್ಯ ಉತ್ಸವದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ವಿಶೇಷ ಮತ್ತು ಉಚಿತ ಬಸ್ ಸೌಕರ್ಯ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದರು.

ಬೆಳಗಾವಿ ಮಹಾನಗರ ಪೊಲೀಸ್ ಆಯುಕ್ತ ಡಾ.ಡಿ.ಸಿ.ರಾಜಪ್ಪ, ಪ್ರೊಬೇಷನರಿ ಐಎಎಸ್ ಅಧಿಕಾರಿ ಮೀನಾ, ಮಹಾನಗರ ಪಾಲಿಕೆ ಆಯುಕ್ತ ಶಶಿಧರ ಕುರೇರ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವೀಂದ್ರ ಗಡಾದಿ, ಶ್ರೀನಿವಾಸ ತಾಳೂರಕರ, ಮಲ್ಲೇಶಪ್ಪ ಚೌಗುಲೆ, ಅರವಿಂದ ದೇಶಪಾಂಡೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಬೆಳಗ್ಗೆ ದೇವಸ್ಥಾನದಲ್ಲಿ ವಿಶೇಷ ಪೂಜೆ

ಸ್ವಾತಂತ್ರ್ಯ ಉತ್ಸವದ ಅಂಗವಾಗಿ ಆ. 15ರಂದು ಬೆಳಗ್ಗೆ ಜಿಲ್ಲೆಯ ಎಲ್ಲ ದೇವಸ್ಥಾನ, ಚರ್ಚ್, ಮಸೀದಿ, ಗುರುದ್ವಾರ ಹಾಗೂ ಎಲ್ಲ ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಗುವುದು. ಸ್ವಾತಂತ್ರ್ಯ ಉತ್ಸವಕ್ಕೆ ಎಲ್ಲ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಕಡ್ಡಾಯವಾಗಿ ಹಾಜರಾಗಬೇಕು. ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು.

ಸ್ವಾತಂತ್ರೃ ಯೋಧರಿಗೆ ಸನ್ಮಾನ

ಸ್ವಾತಂತ್ರ್ಯ ಉತ್ಸವಕ್ಕೆ ನಿಮಿತ್ತ ಆ.15ರಂದು 10.30ಕ್ಕೆ ಸ್ವಾತಂತ್ರೃ ಹೋರಾಟಗಾರರು ಹಾಗೂ ಯೋಧರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ. ಸಂಜೆ 6 ಗಂಟೆಗೆ ಕುಮಾರ ಗಂಧರ್ವ ರಂಗಮಂದಿರದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿವೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಎಚ್.ಬಿ.ಬೂದೆಪ್ಪ ವಿವರಿಸಿದರು.

Stay connected

278,751FansLike
584FollowersFollow
622,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...