ಬೆಳಗಾವಿ: ಜಿಲ್ಲೆಯ್ಯದಂತ 34 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಶುಕ್ರವಾರ ಮೊದಲ ದಿನದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಯಾವುದೇ ಗೊಂದಲ, ಸಮಸ್ಯೆಗಳಿಲ್ಲದೆ ನಡೆದಿದ್ದು, 20,049 ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.
ಭೌತಶಾಸ್ತ ವಿಷಯಕ್ಕೆ ನೋಂದಣಿಯಾಗಿರುವ 5820 ಹೊಸ ವಿದ್ಯಾರ್ಥಿಗಳ ಪೈಕಿ 5692 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 128 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಅರ್ಥಶಾಸ್ತ್ರ ವಿಷಯಕ್ಕೆ ನೋಂದಣಿಯಾಗಿರುವ 14,073 ಹೊಸ ವಿದ್ಯಾರ್ಥಿಗಳ ಪೈಕಿ 13,537 ವಿದ್ಯಾರ್ಥಿಗಳ ಪರೀಕ್ಷೆಗೆ ಹಾಜರಾಗಿ 536 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
ಅರ್ಥಶಾಸ್ತ್ರ ವಿಷಯಕ್ಕೆ ನೋಂದಣಿಯಾಗಿರುವ 981 ಹಳೆಯ ವಿದ್ಯಾರ್ಥಿಗಳ ಪೈಕಿ 820 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. 161 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.ಒಟ್ಟಿನಲ್ಲಿ ಮೊದಲ ದಿನದ ದ್ವಿತೀಯ ಪಿಯುಸಿಯ ಅರ್ಥಶಾಸ್ತ್ರ ಮತ್ತು ಭೌತಶಾಸ್ತ್ರ ವಿಷಯ ಪರೀಕ್ಷೆಗೆ 20,049 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಯಾವುದೇ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಡಿಬಾರ ಕೇಸ್ (ಎಂಪಿಸಿ) ಆಗಿಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಎಸ್.ಎಸ್.ಹಿರೇಮಠ ತಿಳಿಸಿದ್ದಾರೆ.