More

    1,748 ಮನೆಗಳ ಮಂಜೂರಾತಿ – ಅಭಯ ಪಾಟೀಲ

    ಬೆಳಗಾವಿ: ಬೆಳಗಾವಿ ದಕ್ಷಿಣ ಕ್ಷೇತ್ರದ ವಸತಿ ರಹಿತ ಪಲಾನುಭವಿಗಳಿಗಾಗಿ ‘ಸರ್ವರಿಗೂ ಸೂರು ಯೋಜನೆ’ಯಡಿ 1,748 ಮನೆಗಳ ನಿರ್ಮಾಣಕ್ಕೆ ಮಂಜೂರಾತಿ ಪಡೆಯುವಲ್ಲಿ ಶಾಸಕ ಅಭಯ ಪಾಟೀಲ ಯಶಸ್ವಿಯಾಗಿದ್ದಾರೆ.

    ಈ ಕ್ಷೇತ್ರದಲ್ಲಿ ಬಹಳಷ್ಟು ಜನರು ವಸತಿ ರಹಿತರಾಗಿದ್ದಾರೆ. ಕುಟುಂಬ ನಿರ್ವಹಣೆಗೆ ಪರದಾಡುತ್ತಿದ್ದಾರೆ. ಅವರಿಗೆ ಮನೆ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳುವಂತೆ ಅಭಯ ಪಾಟೀಲ 2018ನೇ ಸಾಲಿ ನಿಂದಲೇ ಮನವಿ ಸಲ್ಲಿಸುತ್ತ ಬಂದಿದ್ದರು. 5 ಸಾವಿರ ಮನೆಗಳನ್ನು ಕ್ಷೇತ್ರಕ್ಕೆ ಒದಗಿಸುವಂತೆ ಮುಖ್ಯಮಂತ್ರಿಗಳು ಹಾಗೂ ವಸತಿ ಸಚಿವರಿಗೆ ಒತ್ತಾಯಿಸಿದ್ದರು.

    ರಾಜ್ಯದ 224 ಕ್ಷೇತ್ರಗಳ ಪೈಕಿ ನಮ್ಮ ಕ್ಷೇತ್ರಕ್ಕೆ ಹೆಚ್ಚಿನ ಮನೆಗಳ ನಿರ್ಮಾಣಕ್ಕೆ ಸರ್ಕಾರ ಅನುಮತಿ ನೀಡಿದೆ. ಯೋಜನೆಯ ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ. ನವೆಂಬರ್ ವೇಳೆಗೆ ಕಾಮಗಾರಿ ಆರಂಭಿಸುವ ಉದ್ದೇಶವಿದೆ ಎಂದು ಅಭಯ ಪಾಟೀಲ ತಿಳಿಸಿದ್ದಾರೆ. ತಮ್ಮ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಹಾಗೂ ಮಾನ್ಯ ವಸತಿ ಸಚಿವರಿಗೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts