16 C
Bangalore
Saturday, December 7, 2019

ತಮಿಳುನಾಡು ಕೊಲೆ ಆರೋಪಿ ಘಟಪ್ರಭಾದಲ್ಲಿ ಬಂಧನ

Latest News

ಎಲ್ಲ ಸಮುದಾಯಗಳ ನಾಯಕ ಬಾಬಾಸಾಹೇಬ್

ಚಿಕ್ಕಬಳ್ಳಾಪುರ: ಪುತ್ಥಳಿಗೆ ಮಾಲಾರ್ಪಣೆ, ಉಪನ್ಯಾಸ ಸೇರಿ ವಿವಿಧ ಕಾರ್ಯಕ್ರಮಗಳೊಂದಿಗೆ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್‌ರವರ ಪರಿನಿಬ್ಬಾಣ ದಿನ ಶುಕ್ರವಾರ ನಡೆಯಿತು....

ಮತಯಂತ್ರಕ್ಕೆ ಪೊಲೀಸ್ ಸರ್ಪಗಾವಲು

ಹಾವೇರಿ: ಜಿಲ್ಲೆಯ ರಾಣೆಬೆನ್ನೂರ ಹಾಗೂ ಹಿರೇಕೆರೂರ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ತಾಲೂಕಿನ ದೇವಗಿರಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್​ನ ಸ್ಟ್ರಾಂಗ್ ರೂಂನಲ್ಲಿ ಪೊಲೀಸ್ ಸರ್ಪ...

ಅಳಿದುಳಿದ ಉಳ್ಳಾಗಡ್ಡಿಗೂ ಡಿಮಾಂಡ್

ರಾಣೆಬೆನ್ನೂರ: ಕಳೆದ ಒಂದು ತಿಂಗಳ ಹಿಂದೆ ಸಂಪೂರ್ಣ ಬೆಲೆ ಕಳೆದುಕೊಂಡಿದ್ದ ಉಳ್ಳಾಗಡ್ಡಿ ಬೆಳೆಗೆ ಇದೀಗ ಭಾರಿ ಡಿಮಾಂಡ್ ಬಂದಿದೆ. ದರದಲ್ಲಿ ಕೂಡ ಭಾರಿ...

ಸಿಸಿಐನಿಂದ ಹತ್ತಿ ಖರೀದಿ ಶುರು

ಲಕ್ಷ್ಮೇಶ್ವರ: ಒಂದು ವಾರದಿಂದ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಿಂದಾಗಿ ಭಾರತೀಯ ಹತ್ತಿ ನಿಗಮ (ಸಿಸಿಐ)ದವರು ಬೆಂಬಲ ಬೆಲೆಯಡಿ ಹತ್ತಿ...

ಕೆಲಗೇರಿ ಕೆರೆ ಸಂರಕ್ಷಣೆಗೆ ಕ್ರಮ

ಧಾರವಾಡ: ನಗರದ ಇತಿಹಾಸ ಮತ್ತು ನೈಸರ್ಗಿಕ ಪರಂಪರೆ ಪ್ರತಿನಿಧಿಸುವ ಕೆಲಗೇರಿ ಮತ್ತು ಸಾಧನಕೇರಿ ಕೆರೆಗಳನ್ನು ಸಂರಕ್ಷಿಸಿ ಅಬಿವೃದ್ಧಿಪಡಿಸಲಾಗುತ್ತದೆ. ಕೆರೆಗಳ ಸೌಂದಯೀಕರಣಗೊಳಿಸಿ ಪ್ರವಾಸಿತಾಣಗಳಾಗಿ ರೂಪಿಸಲು...

ಘಟಪ್ರಭಾ: ಪ್ರೀತಿಸುತ್ತಿದ್ದ ಹುಡುಗಿಯನ್ನು ಕೊಚ್ಚಿ ಕೊಲೆ ಮಾಡಿ ಶವ ಸುಟ್ಟು ತಲೆ ಮರೆಸಿಕೊಂಡಿದ್ದ ತಮಿಳುನಾಡು ಮೂಲದ ಆರೋಪಿಯನ್ನು ಘಟಪ್ರಭಾ ರೈಲ್ವೆ ಆರ್‌ಪಿಎಫ್ ಸಿಬ್ಬಂದಿ ಶನಿವಾರ ಸಂಜೆ ಬಂಧಿಸಿ ತಮಿಳುನಾಡು ಪೊಲೀಸರಿಗೆ ಒಪ್ಪಿಸಿದ್ದಾರೆ.

ಕೊಲೆ ಆರೋಪಿಯನ್ನು ಶಿವಾ (30) ಎಂದು ಗುರುತಿಸಲಾಗಿದೆ. ಈತ ಮುಂಬೈಯಿಂದ ಲೋಕಮಾನ್ಯ ತಿಲಕ್ ರೈಲಿನಲ್ಲಿ ಶುಕ್ರವಾರ ಬೆಳಗ್ಗೆ 7ಗಂಟೆಗೆ ಘಟಪ್ರಭಾ ತಲುಪಿದ್ದಾನೆ. ರೈಲು ಘಟಪ್ರಭಾ ನಿಲ್ದಾಣದಿಂದ ಬಿಟ್ಟ ನಂತರ ರೈಲಿನಿಂದ ಹೊರಗೆ ಜಿಗಿದಿದ್ದಾನೆ. ಇದನ್ನು ಗಮನಿಸಿದ ಘಟಪ್ರಭಾ ರೈಲ್ವೆ ನಿಲ್ದಾಣದಲ್ಲಿ ಕರ್ತವ್ಯದಲ್ಲಿರುವ ಆರ್‌ಪಿಎಫ್ ಸಿಬ್ಬಂದಿ ಆತನನ್ನು ವಶಕ್ಕೆ ಪಡೆದು ವಿಚಾರಿಸಿದ್ದಾರೆ. ಒಂದು ದಿನ ಪೂರ್ತಿ ವಿಚಾರಿಸಿದರೂ ಆತ ಸರಿಯಾಗಿ ಮಾತನಾಡಿಲ್ಲ. ಹಣವಿಲ್ಲದೆ ತಿರುಗುತ್ತಿದ್ದೇನೆ ಎಂದು ತಿಳಿಸಿದ್ದಾನೆ. ಚಲಿಸುವ ರೈಲಿನಿಂದ ಜಿಗಿದ ಕಾರಣ ತಿಳಿಯಲು ಪ್ರಯತ್ನಿಸಿದ ಆರ್‌ಪಿಎಫ್ ಅಧಿಕಾರಿಗಳು ನ್ಯಾಯಾಲಯದ ವಶಕ್ಕೆ ನೀಡಲು ಮುಂದಾಗುತ್ತಿದ್ದಂತೆಯೇ ಆರೋಪಿ ತಾನು ಮಾಡಿದ ಅಪರಾಧದ ಬಗ್ಗೆ ಬಾಯಿ ಬಿಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ತಮಿಳುನಾಡು ರಾಜ್ಯದ ರಾಮನಾಥಪುರಂ ಜಿಲ್ಲೆ ಅಟ್ಟ್ಯಾಳ ತಾಲೂಕಿನ ಕರುಂಗಲ್ ಗ್ರಾಮದ ಈತನ ಹೆಸರು ಶಿವಾ, ವಯಸ್ಸು 30, ತಂದೆ ರವಿ ಎಂದು ಗೊತ್ತಾಗಿದೆ. ಆತನಿಗೆ ಮದುವೆಯಾಗಿದ್ದು ಎರಡು ಮಕ್ಕಳು ಇದ್ದಾರೆ. ಈತ ಮಾಲದಿ ಎನ್ನುವ 20 ವರ್ಷದ ಯುವತಿಯನ್ನು ಪ್ರೀತಿಸುತ್ತಿದ್ದ. ಇಬ್ಬರ ನಡುವೆ ಜಗಳವಾದ ಕಾರಣ ಜೂನ್ 29ರಂದು ಪ್ರೀತಿಸಿದ ಹುಡುಗಿಯನ್ನು ಕೊಚ್ಚಿ ಕೊಲೆ ಮಾಡಿ ನಿರ್ಜನ ಪ್ರದೇಶದಲ್ಲಿ ಸುಟ್ಟು ಈತ ಊರು ಬಿಟ್ಟಿದ್ದ. ತಮಿಳುನಾಡಿನಲ್ಲಿ ಈ ಕೊಲೆ ಪ್ರಕರಣದ ಬಗ್ಗೆ ಪತ್ರಿಕೆ ಹಾಗೂ ಟಿವಿ ಮಾಧ್ಯಮದಲ್ಲಿ ಸುದ್ದಿ ಪ್ರಕಟಗೊಂಡಿತ್ತು. ಆ ನಂತರ ಶಿವಾ ಕೆಲವು ದಿನ ಆಂಧ್ರ ಹಾಗೂ ಮಹಾರಾಷ್ಟ್ರದಲ್ಲಿ ವಾಸವಾಗಿದ್ದ. ಯುವತಿ ಕಾಣೆಯಾದ ಬಗ್ಗೆ ಜೂನ್ 29ರಂದು ತಮಿಳುನಾಡಿನಲ್ಲಿ ದೂರು ದಾಖಲಾಗಿದೆ. ಜುಲೈ 13ರಂದು ಕೊಲೆ ಪ್ರಕರಣ ದಾಖಲಾಗಿದೆ. ತಮಿಳುನಾಡು ಪೊಲೀಸರು ಈತನಿಗೆ ಹುಡುಕಾಡುತ್ತಿದ್ದರು.

ಆರ್‌ಪಿಎಫ್ ಪಿಎಸ್‌ಐ ಎಂ.ಎಸ್.ವಾಡೇದವರ, ಆರ್.ಕೆ.ಬಡಿಗೇರ, ಎನ್.ಎಸ್.ಪಾಟೀಲ ಈತನನ್ನು ಬಂಧಿಸಿ ವಿಚಾರಿಸಿದ ನಂತರ ತಮಿಳುನಾಡು ಪೊಲೀಸರಿಗೆ ತಿಳಿಸಿದ್ದಾರೆ. ಕರುಂಗಲ ಪೊಲೀಸ್ ಠಾಣೆಯ ಪಿಎಸ್‌ಐ ಮಾಧವನ್ ಹಾಗೂ ಸಿಬ್ಬಂದಿ ಘಟಪ್ರಭಾಕ್ಕೆ ಆಗಮಿಸಿ ಶನಿವಾರ ರಾತ್ರಿ 9 ಗಂಟೆಗೆ ಕೊಲೆ ಆರೋಪಿಯನ್ನು ತಮ್ಮ ವಶಕ್ಕೆ ಪಡೆದಿದ್ದಾರೆ.

ಘಟಪ್ರಭಾ ರೈಲ್ವೆ ಆರ್‌ಪಿಎಫ್ ಅಧಿಕಾರಿಗಳ ಸಮಯ ಪ್ರಜ್ಞೆ, ಕರ್ತವ್ಯನಿಷ್ಠೆ ಪ್ರಶಂಸೆಗೆ ಪಾತ್ರವಾಗಿದೆ.

Stay connected

278,739FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...