ಬೆಳಗಾವಿ: ಪಾಕ್‌ಗೆ ಪಾಠ ಕಲಿಸಿದ ಸೇನೆ

ಬೆಳಗಾವಿ: ಭಾರತೀಯ ಸೇನಾಪಡೆಯ ಯೋಧರು ಸರ್ಜಿಕಲ್ ಏರ್ ಸ್ಟ್ರೈಕ್ ಮೂಲಕ ಪಾಕ್‌ಗೆ ತಕ್ಕ ಪಾಠ ಕಲಿಸಿದ್ದಾರೆ ಎಂದು ರಾಜ್ಯಸಭೆ ಸದಸ್ಯ ಡಾ.ಪ್ರಭಾಕರ ಕೋರೆ ಹೇಳಿದ್ದಾರೆ. ಸುದ್ದಿಗಾರರ ಜತೆ ಮಂಗಳವಾರ ಮಾತನಾಡಿ, ಭಾರತೀಯರು ಶಾಂತಿ ಪ್ರಿಯರು. ಆದರೆ ಅನ್ಯಾಯವನ್ನು ಸಹಿಸುವುದಿಲ್ಲ. ಭಾರತೀಯ ವಾಯುಸೇನೆ ಪಾಕಿಸ್ತಾನಕ್ಕೆ ಸರಿಯಾದ ಪಾಠ ಕಲಿಸಿದೆ.ಈ ದಾಳಿ ಹೆಮ್ಮೆಯ ಸಂಗತಿಯಾಗಿದೆ.ದೇಶದ ಸೈನಿಕರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಪಾಕಿಸ್ತಾನಕ್ಕೆ ಶಾಂತಿ ಮಂತ್ರ ಬೋಧಿಸಿದ್ದರು. ಕೊನೆಗೆ ಕಾರ್ಗಿಲ್ ಯುದ್ಧದಲ್ಲಿ ಪಾಠ ಕಲಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಸಹ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡುತ್ತಲೇ ಬಂದಿದ್ದಾರೆ.ಒಂದು ವಾರದ ಹಿಂದೆ ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಭಾರತದ ಸೈನಿಕರ ಮೇಲೆ ದಾಳಿ ನಡೆಸಿ ಪಾಕಿಸ್ತಾನದ ಉಗ್ರರು ಅಟ್ಟಹಾಸ ಮೆರೆದಿದ್ದರು. ಈಗ ಭಾರತೀಯ ವಾಯುಸೇನೆ 300ಕ್ಕೂ ಹೆಚ್ಚು ಉಗ್ರರನ್ನು ಹೊಡೆದುರುಳಿಸಿದೆ ಎಂದು ಡಾ.ಕೋರೆ ಹೇಳಿದರು.