ವಿದ್ಯಾರ್ಥಿಗಳ ಕೈಯಲ್ಲಿ ಶೌಚಗೃಹ, ಬೈಕ್​ ತೊಳೆಸ್ತಾನೆ ಈ ಶಿಕ್ಷಕ!

ಬೆಳಗಾವಿ: ಮಕ್ಕಳು ಉತ್ತಮ ವಿದ್ಯಾಭ್ಯಾಸ ಮಾಡಲಿ ಎಂದು ಪಾಲಕರು ಅವರನ್ನು ಶಾಲೆಗೆ ಕಳುಹಿಸಿದರೆ, ಅವರ ಕೈಯಿಂದ ಶಿಕ್ಷಕರು ಶೌಚಗೃಹ ಹಾಗೂ ಬೈಕ್​ ತೊಳೆಯುವ ಕೆಲಸಗಳನ್ನು ಮಾಡಿಸಿದ್ದಾರೆ.

ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಬಡಿಗವಾಡ ಪ್ರಾಥಮಿಕ ಶಾಲಾ ಶಿಕ್ಷಕ ಜೈಪಾಲ್ ಎಂಬಾತ ಈ ರೀತಿ ಶಾಲಾ ಮಕ್ಕಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಕಂಡುಬಂದಿದೆ. ನಾಲ್ಕೈದು ವಿದ್ಯಾರ್ಥಿಗಳನ್ನು ಪ್ರತಿನಿತ್ಯ ಈ ರೀತಿ ಕೆಲಸಗಳಿಗೆ ಬಳಸಿಕೊಳ್ಳುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಸದ್ಯ ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ನೆಟ್ಟಿಗರು ಶಿಕ್ಷಕನ ವರ್ತನನೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *