More

    ಗಲಭೆಕೋರರ ವಿರುದ್ಧ ಕಠಿಣ ಕ್ರಮ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ

    ಶಿವಮೊಗ್ಗ: ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ ಮತ್ತು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಲಭೆಕೋರರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತದೆ. ಪುತ್ಥಳಿ ಹಾಳುಗೆಡವಿದವರ ವಿರುದ್ಧ ವಿಧಾನಸಭೆ ಅಧಿವೇಶನದಲ್ಲಿ ಚರ್ಚೆ ಮಾಡುತ್ತೇನೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
    ವಿನೋಬನಗರ ನಿವಾಸದಲ್ಲಿ ಭಾನುವಾರ ಮಾತನಾಡಿದ ಅವರು, ಅಧಿವೇಶನ ನಡೆಯುತ್ತಿದ್ದು ಕೆಲವರು ಉದ್ದೇಶಪೂರ್ವಕವಾಗಿ ಗದ್ದಲ ಎಬ್ಬಿಸುತ್ತಿದ್ದಾರೆ. ಪುತ್ಥಳಿ ಹಾಳುಗೆಡವಿರುವುದನ್ನು ಸಹಿಸಲು ಸಾಧ್ಯವೇ ಇಲ್ಲ. ಈ ಬಗ್ಗೆ ಸೋಮವಾರ ಅಧಿವೇಶನದಲ್ಲಿ ಸುದೀರ್ಘ ಚರ್ಚೆ ಮಾಡುತ್ತೇನೆ. ಇನ್ಮುಂದೆ ಈ ರೀತಿಯ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡಲಿದೆ ಎಂದರು.
    ರಾಯಣ್ಣ ಪ್ರತಿಮೆ ಧ್ವಂಸ, ಗಲಭೆ ಸಂಬಂಧ ಈಗಾಗಲೇ 23 ಮಂದಿಯನ್ನು ಬಂಧಿಸಿ ಹಿಂಡಲಗಾ ಜೈಲಿಗೆ ಕಳಿಸಲಾಗಿದೆ. ಕೃತ್ಯದಲ್ಲಿ ಶಾಮೀಲಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಕಠಿಣ ಕ್ರಮ ಜರುಗಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಗೃಹ ಸಚಿವರಿಗೆ ಸೂಚನೆ ನೀಡಿದ್ದಾರೆ ಎಂದು ಹೇಳಿದರು.
    ಎಂಇಎಸ್ ಈ ಮಟ್ಟಕ್ಕೆ ಬೆಳೆಯಲು ಬಿಜೆಪಿ ನೀಡಿದ್ದ ಬೆಂಬಲವೇ ಕಾರಣ ಎಂಬ ಆರೋಪದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಯಾರೋ ಕೆಲವರು ಸತ್ಯ ಸಂಗತಿ ತಿಳಿಯದೆ ಆರೋಪ ಮಾಡಿದ್ದಾರೆ. ಇಂತಹ ಆರೋಪಗಳಿಗೆ ಅರ್ಥವಿಲ್ಲ. ಈ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದರೂ ಕಠಿಣ ಕ್ರಮ ಜರುಗಿಸುತ್ತೇವೆ. ತಪ್ಪಿತಸ್ಥರನ್ನು ಜೈಲಿಗೆ ಕಳಿಸಿರುವುದೇ ಇದಕ್ಕೆ ಉದಾಹರಣೆ ಎಂದರು. ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಎಂಎಲ್‌ಸಿ ಎಸ್.ರುದ್ರೇಗೌಡ, ಸೂಡಾ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts