ಬೆಳಗಾವಿ ಜಿಪಂ ಸಿಇಒ ಈಗ ಬಾಗಲಕೋಟೆ ಡಿಸಿ

ಬೆಳಗಾವಿ: ಜಿಲ್ಲಾ ಪಂಚಾಯಿತಿ ಸಿಇಒ ಆಗಿದ್ದ ರಾಮಚಂದ್ರನ್ ಆರ್. ಅವರನ್ನು ಬಾಗಲಕೋಟೆ ಜಿಲ್ಲಾಧಿಕಾರಿಯನ್ನಾಗಿ ನೇಮಿಸಿ ವರ್ಗಾವಣೆ ಮಾಡಿ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ.

ಬಾಗಲಕೋಟೆ ಜಿಲ್ಲಾಧಿಕಾರಿಯಾಗಿದ್ದ ಕೆ.ಜಿ.ಶಾಂತಾರಾಂ ಅವರನ್ನು ಸರ್ಕಾರ ವರ್ಗಾವಣೆ ಮಾಡಿದೆ. ಬೆಳಗಾವಿ ಜಿಪಂ ಸಿಇಒ ಖಾಲಿ ಹುದ್ದೆಗೆ ಬಳ್ಳಾರಿ ಜಿಪಂ ಸಿಇಒ ಆಗಿದ್ದ ಡಾ.ಕೆ.ವಿ.ರಾಜೇಂದ್ರ ಅವರನ್ನು ಸರ್ಕಾರ ನೇಮಕ ಮಾಡಿದೆ.

ಕರ್ನಾಟಕ ನಗರ ನೀರು ಸರಬರಾಜು ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಎನ್.ಜಯರಾಂ ಅವರಿಗೆ ರಾಜ್ಯ ಸಹಕಾರ ಮಹಾಮಂಡಳದ ವ್ಯವಸ್ಥಾಪಕ ನಿರ್ದೇಶಕರ ಹೆಚ್ಚುವರಿ ಹುದ್ದೆ ನೀಡಲಾಗಿದೆ. ರಾಜ್ಯದ ವಿವಿಧೆಡೆ ಕಾರ್ಯನಿರ್ವಹಿಸುತ್ತಿರುವ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅಧೀನ ಕಾರ್ಯದರ್ಶಿ ಕುಮಟಾ ಪ್ರಕಾಶ ಆದೇಶ ಹೊರಡಿಸಿದ್ದಾರೆ.