More

    ಹಣಕಾಸು ವಿಚಾರವಾಗಿ ಜಗಳ: ಕೋರ್ಟ್​ ಆವರಣದಲ್ಲೇ ಪತ್ನಿಯ ಕಾಲು ಕತ್ತರಿಸಿದ ಪತಿರಾಯ..

    ಬೆಳಗಾವಿ: ಕೋರ್ಟ್​ ಆವರಣದಲ್ಲೇ ಪತ್ನಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಪತಿ ಆಕೆಯನ್ನು ಕೊಲೆ ಮಾಡಲು ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಹಿರಿಯ ದಿವಾಣಿ ನ್ಯಾಯಾಲಯದ ಆವರಣದಲ್ಲಿ ನಡೆದಿದೆ.

    ನನಗುಂಡಿಕೊಪ್ಪದ ನಿವೃತ್ತ ಸೈನಿಕ ಶಿವಪ್ಪ ಅಡಕಿ ಎಂಬಾತ ಪತ್ನಿ ಜಯಮಾಲಾ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿ ಆಕೆಯ ಕಾಲನ್ನೇ ಕತ್ತರಿಸಿದ್ದಾನೆ. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಪತಿ-ಪತ್ನಿಯ ಮಧ್ಯೆ ಕಲಹ ಇತ್ತು ಎನ್ನಲಾಗಿದೆ.

    ಈ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಪ್ರಕರಣ ಇತ್ತು. 11 ವರ್ಷಗಳ ಹಿಂದೆ ಧಾರವಾಡ ಜಿಲ್ಲೆಯ ವರೂರ್ ಗ್ರಾಮದ ಜಯಮಾಲಾರನ್ನು ಸೈನಿಕ ಶಿವಪ್ಪ ಮದುವೆಯಾಗಿದ್ದ. ಪತಿ ಜೊತೆಗೆ ಜಗಳವಾಡಿ ಪತ್ನಿ ಜಯಮಾಲಾ ತವರುಮನೆ ಹುಬ್ಬಳ್ಳಿ ತಾಲೂಕಿನ ವರೂರದಲ್ಲಿ ಇರುತ್ತಿದ್ದಳು. ಬ್ಯಾಂಕ್ ನಲ್ಲಿರುವ ಹಣದ ವಿಚಾರವಾಗಿ ಇಬ್ಬರ ನಡುವೆ ಆಗಾಗ ಜಗಳ ನಡೆಯುತ್ತಿತ್ತು.

    ಈ ವಿಚಾರವಾಗಿ ಕೋರ್ಟ್​ನಲ್ಲಿ ಕೇಸ್ ಕೂಡ ದಾಖಲಾಗಿತ್ತು, ಇಂದು ವಿಚಾರಣೆಗೆ ಬಂದ ಪತ್ನಿಯ ಮೇಲೆ ಆತ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಪರಿಣಾಮ ಪತ್ನಿ ಜಯಮಾಲಾ ಸ್ಥಿತಿ ಗಂಭೀರವಾಗಿದ್ದು, ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಹೀಗಾಗಿ, ಆಕೆಯನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

    ರಸ್ತೆ ಗುಂಡಿಗೆ ಬಿದ್ದು ಬಿಜೆಪಿ ಮುಖಂಡನ ಸಾವು: ರಸ್ತೆ ತಡೆದು ಗ್ರಾಮಸ್ಥರ ಪ್ರತಿಭಟನೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts