ಬಳ್ಳಾರಿ : ನಗರದ ವಿವಿಧೆಡೆ ಕಳವುಯಾಗಿದ್ದ 10 ಲಕ್ಷ ರೂ. ಮೌಲ್ಯದ ಒಟ್ಟು 30 ಬೈಕ್‌ಗಳನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ.
ರೂಪನಗುಡಿ ಮೂಲದ ಪ್ರಹ್ಲಾದ್ ಬಂಧಿತ ಆರೋಪಿ. ಮೇ.13 ರಂದು ಠಾಣೆ ವ್ಯಾಪ್ತಿಯಲ್ಲಿ ಸಂಶಯಾಸ್ಪದ ರೀತಿಯಲ್ಲಿ ಬೈಕ್ ಚಲಿಸುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ತನಿಖೆಯಲ್ಲಿ ಒಪ್ಪಿಕೊಂಡಿದ್ದಾನೆ. ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
====
