More

    ಖಾಲಿ ಹುದ್ದೆ ಭರ್ತಿಗೆ ಕ್ರಮಕೈಗೊಳ್ಳಿ

    ಕೃಷಿ ಇಲಾಖೆ ಅಧಿಕಾರಿ, ನೌಕರರ ಸಂಘ ಒತ್ತಾಯ ಅಪರ ಜಿಲ್ಲಾಧಿಕಾರಿ ಮೂಲಕ ಸಿಎಂಗೆ ಮನವಿ

    ಬಳ್ಳಾರಿ: ಕೃಷಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆ ಭರ್ತಿ ಮಾಡಿ ಕಾರ್ಯಾಭಾರ ತಗ್ಗಿಸಬೇಕು ಎಂದು ಒತ್ತಾಯಿಸಿ ಕೃಷಿ ಇಲಾಖೆ ಅಧಿಕಾರಿ, ನೌಕರರ ಸಂಘ ಜಿಲ್ಲಾ ಘಟಕ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿತು.

    1987ರಿಂದ ಕೃಷಿ ಸಹಾಯಕರ ನೇಮಕಾತಿ ಮಾಡಿಲ್ಲ. ವೆಚ್ಚ ಕಡಿತ ಉದ್ದೇಶಕ್ಕಾಗಿ 2014-15ರಲ್ಲಿ ಜಲಾನಯನ ಇಲಾಖೆಯನ್ನು ಕೃಷಿ ಇಲಾಖೆಯಲ್ಲಿ ವಿಲೀನಗೊಳಿಸಲಾಗಿದೆ. ಎರಡೂ ಇಲಾಖೆಯಲ್ಲಿ ಅಗತ್ಯ ಸಿಬ್ಬಂದಿ ಇಲ್ಲವಾಗಿದೆ. ಮೂರ್ನಾಲ್ಕು ನೌಕರರು ಮಾಡುವ ಕೆಲಸವನ್ನು ಒಬ್ಬರೇ ಮಾಡಬೇಕಿದೆ.

    ಅಧಿಕಾರಿಗಳು, ಕೆಳ ಹಂತದ ನೌಕರರು ಕಾರ್ಯ ಒತ್ತಡದಿಂದ ಬಳಲುತ್ತಿದ್ದಾರೆ. ಹಲವರ ಆರೋಗ್ಯ ಹದಗೆಟ್ಟಿದೆ. ಕೆಲಸ ಬಿಡುವ ಮನಸ್ಥಿತಿಗೆ ಬಂದಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಮಂಜುನಾಥ ಮೂಲಕ ಸಿಎಂಗೆ ಮನವಿ ಸಲ್ಲಿಸಿದರು. ಪದಾಧಿಕಾರಿಗಳಾದ ಸಹದೇವ್, ಚಂದ್ರಶೇಖರ್, ಪಾಲಾಕ್ಷಗೌಡ, ನಾಗರಾಜ್, ಸಂಗಪ್ಪ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts