

ಬಳ್ಳಾರಿ: ಕಾರು ಪಲ್ಟಿಯಾಗಿ ಕರ್ತವ್ಯನಿರತ ಸಹಾಯಕ ಸಬ್ ಇನ್ಸ್ಪೆಕ್ಟರ್ ಒಬ್ಬರು ಸಾವಿಗೀಡಾಗಿರುವ ಘಟನೆ ಕುರಗೋಡು ತಾಲೂಕಿನ ಕಲ್ಲುಕಂಭ ಗ್ರಾಮದ ಬಳಿ ಬುಧವಾರ ನಡೆದಿದೆ.
ಪ್ರಲ್ಹಾದ್ (55) ಮೃತ ಎಎಸ್ಐ. ಇವರು ಕುರುಗೋಡು ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.
ಕರ್ತವ್ಯದ ಮೇಲೆ ತೆರಳುವಾಗ ಚಾಲಕನ ನಿಯಂತ್ರಣ ಕಳೆದುಕೊಂಡು ಕಾರು ರಸ್ತೆ ಬಳಿ ಇದ್ದ ಮೊರಿಗೆ ಡಿಕ್ಕಿ ಹೊಡೆದು, ನಂತರ ಅಂಜುರ ತೋಟಕ್ಕೆ ನುಗ್ಗಿ ಪಲ್ಟಿಯಾಗಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಎಎಸ್ಐ ಪ್ರಲ್ಹಾದ್ ಅವರು ಬಳ್ಳಾರಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವಿಗೀಡಾಗಿದ್ದಾರೆ.
ಖಾಸಗಿ ಡ್ರೈವರ್ ಸ್ಥಿತಿ ಗಂಭೀರವಾಗಿದ್ದು, ಗಾಯಾಳುವನ್ನು ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕುರುಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್)