More

    ಭಾರತ್ ಬಂದ್‌ಗೆ ಬಳ್ಳಾರಿ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ: ರೈತ ಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ

    ಬಳ್ಳಾರಿ: ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ರೈತ ಸಂಘಟನೆಗಳು ಮಂಗಳವಾರ ಕರೆ ನೀಡಿದ್ದ ಭಾರತ್ ಬಂದ್‌ಗೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಪ್ರತಿಭಟನೆಗೆ ಸೀಮಿತವಾಯಿತು.

    ನಗರದಲ್ಲಿ ಎಂದಿನಂತೆ ಅಂಗಡಿ ಮುಂಗಟ್ಟುಗಳು ತೆರೆದಿದ್ದವು. ಬೈಕ್, ಆಟೋಗಳು ಮತ್ತು ಬಸ್‌ಗಳ ಸಂಚಾರ ಸಹಜವಾಗಿತ್ತು. ಬೀದಿ ಬದಿ, ಮಾರುಕಟ್ಟೆ, ಪ್ರಮುಖ ರಸ್ತೆಗಳಲ್ಲಿ ವ್ಯಾಪಾರ ವಹಿವಾಟು ನಿರಾಂತಕವಾಗಿತ್ತು. ರಾಯಲ್ ವೃತ್ತದಲ್ಲಿ ಕಾಂಗ್ರೆಸ್ ಮತ್ತು ವಿವಿಧ ಸಂಘಟನೆಗಳಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಯಿತು. ಕಾಂಗ್ರೆಸ್ ಕಾರ್ಯಕರ್ತರು ರಸ್ತೆಗೆ ತರಕಾರಿಗಳನ್ನು ಸುರಿದು ಆಕ್ರೋಶ ವ್ಯಕ್ತಪಡಿಸಿದರು.

    ಸರ್ವಾಧಿಕಾರ ಧೋರಣೆ ಅನುಸರಿಸುತ್ತಿರುವ ಕೇಂದ್ರ ಸರ್ಕಾರ ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವ ರೈತರ ಮೇಲೆ ದೌರ್ಜನ್ಯ ನಡೆಸುತ್ತಿದೆ. ಕೃಷಿ ವಿರೋಧಿ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಹ್ಮದ್ ರಫೀಕ್, ಮುಖಂಡರಾದ ನಾಗರಾಜ್ ಗೌಡ, ಅರುಣ್ ಕುಮಾರ, ಅಲಂ ಪ್ರಶಾಂತ್, ಮನ್ಯಂ ಶೀಧರ್, ರೈತ ಮುಖಂಡ ಮಾಧವ ರೆಡ್ಡಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts