ಬಳ್ಳಾರಿ ; ರಾಜ್ಯ ಸರ್ಕಾರ ಹಿಂದುಳಿದ ವರ್ಗಗಳ ನಿಗಮಗಳಿಗೆ ಅನುದಾನ ಬಿಡುಗಡೆಗೊಳಿಸುವಂತೆ ಒತ್ತಾಯಿಸಿ ಇಲ್ಲಿನ ಡಿಸಿ ಕಚೇರಿ ಆವರಣದಲ್ಲಿ ಜಿಲ್ಲಾ ಬಿಜೆಪಿ ಘಟಕಾದಿಂದ ಶುಕ್ರವಾರ ಪ್ರತಿಭಟಿಸಲಾಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್ ಕುಮಾರ ಮೋಕ ಮಾತನಾಡಿ, ಅಹಿಂದ ಹೆಸರಿನ ಮೇಲೆ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ ಜನರ ಆರ್ಥಿಕ, ಔದ್ಯೋಗಿಕ, ಕೃಷಿ ಮತ್ತು ಶಿಕ್ಷಣಕ್ಕಾಗಿ ನಿಗಮಗಳಿಗೆ ಹಣ ಬಿಡುಗಡೆ ಮಾಡದೇ ಇರುವುದು ಅತ್ಯಂತ ನೋವಿನ ಸಂಗತಿಯಾಗಿದೆ ಎಂದು ಕಿಡಿಕಾರಿದರು.
ಈ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಹಿಂದುಳಿದ ವರ್ಗಗಳ ಅಭೀವೃದ್ಧಿಗೆ 1000 ಕೋಟಿಗೂ ಹೆಚ್ಚು ಅನುದಾನವನ್ನು ದಿ.ದೇವರಾಜ ಅರಸು, ಒಕ್ಕಲಿಗ, ಮರಾಠ, ವಿಶ್ವಕರ್ಮ, ಉಪ್ಪಾರ, ವೀರಶೈವ ಲಿಂಗಾಯತ, ನಿಜಶರಣ ಅಂಬಿಗರ ಚೌಡಯ್ಯ, ಸವಿತಾ ಸಮಾಜ, ಅಲೆಮಾರಿ ಅರೆ ಅಲೆಮಾರಿ,ಮಡಿವಾಳ ಮಾಚಿ ದೇವ, ಮತ್ತು ಕಾಡುಗೊಲ್ಲ ಅಭಿವೃದ್ಧಿ ನಿಗಮಗಳಿಗೆ ಹಣ ಬಿಡುಗಡೆ ಮಾಡಿತ್ತು. ಆದರೆ ತಮ್ಮ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 1600ಕೋಟಿ ಬಜೆಟನಲ್ಲಿ ಘೋಷಣೆ ಮಾಡಿ ಕೇವಲ 57.04 ಕೋಟಿ ರೂಪಾಯಿ ಮಾತ್ರ ವೆಚ್ಚ ಮಾಡಿ ಮೋಸ ಮಾಡಿದೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿ ವಿದ್ಯಾರ್ಥಿನಿಯರ ಶೈಕ್ಷಣಿಕ ಸಾಲಕ್ಕಾಗಿ 6065 ಅರ್ಜಿಗಳು ಸಲ್ಲಿಕೆಯಾದರೂ ಒಂದು ಪೈಸೆ ಹಣವು ಕೂಡ ಬಿಡುಗಡೆ ಮಾಡದೇ ಇರುವುದು ಹಿಂದುಳಿದ ವರ್ಗಗಳ ಮಕ್ಕಳಿಗೆ ಮಾಡಿರುವ ಅನ್ಯಾಯವನ್ನು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಬಲವಾಗಿ ಖಂಡಿಸಿದೆ ಎಂದರು.
ಅನುದಾನ ಬಿಡುಗಡೆಗೆ ಬಿಜೆಪಿ ಆಗ್ರಹ
You Might Also Like
ಚಳಿಗಾಲದಲ್ಲಿ ಈ ಒಂದು ಹಣ್ಣನ್ನು ತಿಂದರೆ ಸಾಕು.. ರೋಗಗಳೇ ಬರುವುದಿಲ್ಲ..fruits
fruits : ಚಳಿಗಾಲ ಬಂದಿದೆ ಎಂದರೆ ಕೆಮ್ಮು, ನೆಗಡಿ, ಜ್ವರ, ಗಂಟಲು ನೋವು, ಕೀಲು ನೋವು…
ಮಕರ ರಾಶಿಗೆ ಬುಧ ಪ್ರವೇಶ: ಈ 5 ರಾಶಿಯವರಿಗೆ ರಾಜಯೋಗ, ಖುಲಾಯಿಸಲಿದೆ ಅದೃಷ್ಟ! Zodiac Sign
Zodiac Sign : ಜ್ಯೋತಿಷ್ಯದ ಆಧಾರದ ಮೇಲೆ, ಒಬ್ಬರು ಜನಿಸಿದ ರಾಶಿ, ನಕ್ಷತ್ರ ಹಾಗೂ ಗ್ರಹಗಳ…
ಪೇನ್ ಕಿಲ್ಲರ್ ಮಾತ್ರೆ vs ಜೆಲ್… ಎರಡರಲ್ಲಿ ಯಾವುದು ಉತ್ತಮ? ಇಲ್ಲಿದೆ ಉಪಯುಕ್ತ ಮಾಹಿತಿ… Painkiller Tablet vs Gel
Painkiller Tablet vs Gel : ದೇಹವು ಗಾಯಗೊಂಡಾಗ ಅಥವಾ ಉಳುಕಿದಾಗ ನೋವು ಅನುಭವಿಸುವುದು ಸಹಜ.…