More

    ಗಡಿನಾಡು ಕನ್ನಡಿಗರಿಗೆ ಉದ್ಯೋಗ ನೀಡಿ

    ಬಳ್ಳಾರಿ: ಆಂಧ್ರ ಪ್ರದೇಶದಲ್ಲಿ ವಾಸುತ್ತಿರುವ ಗಡಿನಾಡು ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವಂತೆ ಒತ್ತಾಯಿಸಿ ಸೋಮವಾರ ಆಂಧ್ರಪ್ರದೇಶದ ಕನ್ನಡ ಸಂಘಗಳ ಒಕ್ಕೂಟದಿಂದ ಜಿಲ್ಲಾಧಿಕಾರಿ ಪವನ ಕುಮಾರ ಮಾಲಪಾಟಿ ಅವರಿಗೆ ಮನವಿ ಸಲ್ಲಿಸಲಾಯಿತು.

    ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ವಾಸಿಸುತ್ತಿರುವ ಕನ್ನಡಿಗರಿಗೆ ಗಡಿನಾಡು ಕನ್ನಡಿಗರು ಎಂದು ಪರಿಗಣಿಸಿದಂತೆ ನಮ್ಮನ್ನು ಪರಿಗಣಿಸಬೇಕು. ಆ ಮೂಲಕ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಬೇಕು ಎಂದು ಕಾರ್ಯಕರ್ತರು ಒತ್ತಾಯಿಸಿದರು.

    ಬಳ್ಳಾರಿ ಜಿಲ್ಲೆಗೆ ಹೊಂದಿಕೊಂಡಂತೆ ಇರುವ ಆಂಧ್ರಪ್ರದೇಶದ ಕರ್ನೂಲ್ ಹಾಗೂ ಅನಂತಪುರ ಜಿಲ್ಲೆಯ ಆದೋನಿ, ಆಲೂರು, ರಾಯದುರ್ಗ, ಮಡಕಶಿರ ಭಾಗದಲ್ಲಿ ಅನೇಕ ಕನ್ನಡಿಗರು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ ಎಂದು ಕಾರ್ಯಕರ್ತರು ಅಳಲು ತೋಡಿಕೊಂಡರು.

    ಆಂಧ್ರ ಭಾಗದ ವಿದ್ಯಾರ್ಥಿಗಳು ಕರ್ನಾಟಕಕ್ಕೆ ಬಂದು ಶಿಕ್ಷಣ ಪಡೆಯುತ್ತಿರುವವರಿಗೆ ವಸತಿ ನಿಲಯಗಳಲ್ಲಿ ಅವಕಾಶ ಕಲ್ಪಿಸಬೇಕು. ಅವರಿಗೆ ವಿದ್ಯಾರ್ಥಿ ವೇತನ ನೀಡಬೇಕು. ಬಸ್‌ಪಾಸ್ ಸೌಲಭ್ಯ ಒದಗಿಸಬೇಕು. ಕಲಾವಿದರಿಗೆ ಮಾಸಾಶನ ನೀಡುವಂತಾಗಬೇಕು ಎಂದು ಆಗ್ರಹಿಸಿದರು.

    ಮುಖಂಡರಾದ ಪುರುಷೋತ್ತಮಗೌಡ, ಜಿ.ದೊಡ್ಡಬಸಪ್ಪ, ಯು.ಕಾಡಪ್ಪ, ಗುರುಬಸವರಾಜ, ಚಾನಾಳ್ ಶೇಖರ್, ಡಿ.ವಿಶ್ವನಾಥ್, ಕೃಷ್ಣನಾಯ್ಕ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts