More

    ಮುಂಜಾಗ್ರತೆ ಪಾಲಿಸದಿದ್ದರೆ ಪ್ರಕರಣ ದಾಖಲಿಸಲು ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್ ಸೂಚನೆ

    ಬಳ್ಳಾರಿ: ಸಭೆ, ಸಮಾರಂಭಗಳಲ್ಲಿ ಹೆಚ್ಚಿನ ಜನರು ಸೇರುವ ಜತೆಗೆ ಕರೊನಾ ಮುಂಜಾಗ್ರತಾ ನಿಯಮ ಉಲ್ಲಂಘಿಸಿದರೆ ಅಂಥವರ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದು ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್ ಹೇಳಿದರು.

    ಜಿಲ್ಲೆಯಲ್ಲಿ ಕರೊನಾ ನಿಯಂತ್ರಣಕ್ಕೆ ಜಿಲ್ಲಾಡಳಿತದಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಆದರೂ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದಕ್ಕೆ ಕರೊನಾ ಸೇನಾನಿಗಳು ಎದೆಗುಂದುವ ಅಗತ್ಯ ಇಲ್ಲ. ಜಿಲ್ಲೆಯಲ್ಲಿ ಸೋಂಕಿತರಿಗಾಗಿ 1867 ಬೆಡ್‌ಗಳನ್ನು ಸಿದ್ಧಪಡಿಸಲಾಗಿದೆ. ಸೋಂಕಿತರು ಬೇಗ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ. ಇತರ ಕಾಯಿಲೆಗಳನ್ನು ಹೊಂದಿದವರು ಚೇತರಿಸಿಕೊಳ್ಳಲು ಸ್ವಲ್ಪ ಸಮಯ ಬೇಕಾಗುತ್ತದೆ ಎಂದು ನಗರದಲ್ಲಿ ಬುಧವಾರ ಸುದ್ದಿಗಾರರರೊಂದಿಗೆ ಮಾತನಾಡಿ ತಿಳಿಸಿದರು.

    ರಾಜ್ಯದಲ್ಲಿ ಕರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಜನಪ್ರತಿನಿಧಿಗಳು ಬೇರೆಯವರನ್ನು ಕರೊನಾ ಸೇನಾನಿಗಳು ಎಂದು ಹೇಳುವುದಲ್ಲ. ನಾವೇ ಸೇನಾನಿಗಳಾಗಿ ಕೆಲಸ ಮಾಡುತ್ತಿದ್ದೇವೆ ಎಂಬ ಸಂದೇಶ ರವಾನಿಸಲು ಸೊಂಕಿತರನ್ನು ಭೇಟಿ ಮಾಡಿ ಅಹವಾಲು ಆಲಿಸುತ್ತಿದ್ದೇನೆ. ಐಸೋಲೇಷನ್ ವಾರ್ಡ್‌ನಲ್ಲಿ ಇರುವವರ ಪರಿಸ್ಥಿತಿಯನ್ನು ತಿಳಿಸುವ ಮೂಲಕ ಜನರ ಭಯ ಹೋಗಲಾಡಿಸಬೇಕಿದೆ ಎಂದು ಸಚಿವ ಆನಂದ ಸಿಂಗ್ ಹೇಳಿದರು.

    ಐಸೋಲೇಷನ್ ವಾರ್ಡ್‌ಗೆ ಭೇಟಿ: ಸಚಿವ ಆನಂದ ಸಿಂಗ್ ಬುಧವಾರ ವಿಮ್ಸ್ ನಿರ್ದೇಶಕ ಹಾಗೂ ಕೆಲವು ಮಾಧ್ಯಮದವರ ಜತೆ ಪಿಪಿಇ ಕಿಟ್ ಧರಿಸಿ ನಗರದ ವಿಮ್ಸ್ ದಂತ ವೈದ್ಯಕೀಯ ಆಸ್ಪತ್ರೆಯ ಕರೊನಾ ಸೋಂಕಿತರ ವಾರ್ಡ್‌ಗೆ ಬುಧವಾರ ಭೇಟಿ ನೀಡಿ ಸೋಂಕಿತರ ಆರೋಗ್ಯ ಮತ್ತು ಅಹವಾಲು ವಿಚಾರಿಸಿದರು. ಬಳಿಕ ಸಚಿವ ಆನಂದ ಸಿಂಗ್ ವೈದ್ಯರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ ಜಿಲ್ಲಾಡಳಿತ ಹಾಗೂ ಸರ್ಕಾರದಿಂದ ಆಗಬೇಕಾಗಿರುವ ಸಹಕಾರದ ಬಗ್ಗೆ ಮಾಹಿತಿ ಪಡೆದರು.
    ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ, ಬುಡಾ ಅಧ್ಯಕ್ಷ ದಮ್ಮೂರ್ ಶೇಖರ್ ಹಾಗೂ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts