More

    ಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ತಲುಪಲಿ

    ಬಳ್ಳಾರಿ: ಕೇಂದ್ರ ಮತ್ತು ರಾಜ್ಯ ಸರ್ಕಾರದ ಆರೋಗ್ಯ ಸೇವೆಗಳು ಜನಸಾಮಾನ್ಯರಿಗೆ ತಲುಪಬೇಕಿದೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಬಸರೆಡ್ಡಿ ಹೇಳಿದರು.

    ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಾರ್ಯಾಲಯದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಾಹಿತಿ ಶಿಕ್ಷಣ ಸಂವಹನ ವಿಭಾಗ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಮಂಗಳವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಕುರಿತು ಜಾಗೃತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

    ಸಮಾಜದಲ್ಲಿ ಆರೋಗ್ಯಕರ ವಾತಾವರಣ ನಿರ್ಮಿಸುವುದೇ ಆರೋಗ್ಯ ಇಲಾಖೆ ಕರ್ತವ್ಯವಾಗಿದ್ದು, ಆರೋಗ್ಯ ಸೇವೆಗಳ ಬಗ್ಗೆ ಇರುವ ಸಕಾರಾತ್ಮಕ ಮತ್ತು ನಕಾರಾತ್ಮಕ ಸಂದೇಶ ಕುರಿತು ಜನರಿಗೆ ತಿಳಿಸಬೇಕಿದೆ. ಕರೊನಾ ಬಗ್ಗೆ ಜನರಲ್ಲಿ ಭಯದ ವಾತಾವರಣ ಇತ್ತು. ಅದನ್ನು ಹೊಗಲಾಡಿಸಿ ಧೈರ್ಯ ತುಂಬುವ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು.

    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಎಲ್. ಜನಾರ್ದನ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಆರೋಗ್ಯ ಇಲಾಖೆಯ ಉಚಿತ ಸೇವೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಕಾರ್ಯ ಮಾಡಲಾಗುತ್ತಿದೆ. ದೈನಂದಿನ ಚಟುವಟಿಕೆಗಳ ವಿಚಾರ ವಿನಿಮಯ ಮಾಡಿಕೊಳ್ಳಲು ಎಲ್ಲರ ಸಹಕಾರ ಅಗತ್ಯ ಎಂದರು.
    ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ ಮಾತನಾಡಿ, ಪ್ರಸಕ್ತ ವರ್ಷದ ವಿಶ್ವ ಕ್ಷಯರೋಗ ದಿನದ ಘೋಷ ವಾಕ್ಯವು ‘ಹೌದು, ನಾವು ಕ್ಷಯವನ್ನು ಕೊನೆಗಳಿಸಬಹುದು’ ಎಂಬುದಾಗಿದೆ. ರೋಗ ನಿರ್ಮೂಲನೆಯಲ್ಲಿ ರಾಜ್ಯದಲ್ಲಿಯೇ ಬಳ್ಳಾರಿ ಜಿಲ್ಲೆ 3ನೇ ಸ್ಥಾನದಲ್ಲಿದೆ ಎಂದು ತಿಳಿಸಿದರು.

    ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಆರ್.ಅನಿಲ್‌ಕುಮಾರ್, ತಾಯಿ ಕಾರ್ಡ್, ಗರ್ಭಿಣಿ ಆರೈಕೆ, ಜನನಿ ಸುರಕ್ಷಾ ಯೋಜನೆ, ಪೌಷ್ಟಿಕ ಪುನರ್ವಸತಿ ಕೇಂದ್ರ, ಸ್ನೇಹ ಕ್ಲಿನಿಕ್ ಇತರ ಸೇವೆಗಳ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ವೀರೇಂದ್ರ ಕುಮಾರ್, ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಡಾ.ಪೂರ್ಣಿಮಾ ಕಟ್ಟಿಮನಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಮರಿಯಂಬಿ.ವಿ.ಕೆ, ಜಿಲ್ಲಾ ಕೀಟ ಶಾಸ್ತ್ರಜ್ಞೆ ಡಾ.ನಂದಾಕಡಿ, ತಮ್ಮ ವಿಭಾಗ ಅನುಷ್ಠಾನ ಕಾರ್ಯಕ್ರಮಗಳ ಬಗ್ಗೆ ವಿಷಯ ಮಂಡನೆ ಮಾಡಿದರು.

    ಜಿಲ್ಲಾ ಆರೋಗ್ಯ ತರಬೇತಿ ಕೇಂದ್ರದ ಪ್ರಾಂಶುಪಾಲ ಡಾ.ಗುರುನಾಥ ಬಿ.ಚೌವ್ಹಾಣ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ್ ದಾಸಪ್ಪನವರ್, ಡಾ.ಮಯೂರಿ ಇತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts