More

    ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಖಂಡನೆ

    ಬಳ್ಳಾರಿ: ಅಗತ್ಯ ವಸ್ತುಗಳ ಬೆಲೆ ಏರಿಸಿದ ಕ್ರಮ ಖಂಡಿಸಿ ಜೆಡಿಎಸ್ ಜಿಲ್ಲಾ ಸಮಿತಿ ಪದಾಧಿಕಾರಿಗಳು ಸೋಮವಾರ ಪ್ರತಿಭಟಿಸಿದರು. ನಗರದಲ್ಲಿನ ಪಕ್ಷದ ಜಿಲ್ಲಾ ಕಚೇರಿಯಿಂದ ರಾಯಲ್ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ಪಕ್ಷದ ಜಿಲ್ಲಾಧ್ಯಕ್ಷ ಮೀನಳ್ಳಿ ತಾಯಣ್ಣ ಮಾತನಾಡಿ, ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ, ಅಡುಗೆ ಎಣ್ಣೆ, ಬೆಲ್ಲ, ಅಕ್ಕಿ ಮತ್ತಿತರ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ‘ಅಚ್ಛೇ ದಿನ್ ಬರಲಿವೆ’ ಎಂದು ಅಧಿಕಾರಕ್ಕೆ ಬಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಡವರ ಬೇಬಿಗೆ ಕತ್ತರಿ ಹಾಕುತ್ತಿದೆ ಎಂದರು.

    ರಾಜ್ಯ ಉಪಾಧ್ಯಕ್ಷ ಮುನ್ನಾ ಭಾಯಿ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹತ್ತು ದಿನದೊಳಗೆ ಬೆಲೆ ಇಳಿಕೆ ಮಾಡಬೇಕು. ಇಲ್ಲದಿದ್ದರೆ ಹೋರಾಟದ ಸ್ವರೂಪ ಬದಲಾಗಲಿದೆ ಎಂದು ಎಚ್ಚರಿಸಿದರು.

    ಮುಖಂಡರಾದ ಅದ್ದಿಗೆರಿ ರಾಮಣ್ಣ, ವಾಧಿರಾಜ ಶೆಟ್ಟಿ, ಸುರೇಶ್ ಗೌಡ, ವಿಜಯ ಕುಮಾರ ಮದಿರೆ, ಬಿ.ಎಮ್.ರಫೀ, ವಂಡ್ರಿ, ಅಂಜನೇಯಲು, ಅಲ್ಲಾಬಕ್ಷಾ, ವೀರೇಶ್ ಕಪ್ಪಗಲ್ ನೂರ್, ಕಿರಣ್ ಕುಮಾರ, ವಲೀಬಾಯ್, ಅಂಜಿನಿ, ದಾದಾಪೀರ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts