More

    ಸ್ಪರ್ಧಾತ್ಮಕ ಪರೀಕ್ಷೆ ಲೋಪವಾಗದಿರಲಿ; ಬಳ್ಳಾರಿ ಡಿಸಿ ಪವನ್‌ಕುಮಾರ್ ಮಾಲಪಾಟಿ ಕಟ್ಟು ನಿಟ್ಟಿನ ಸೂಚನೆ

    ಬಳ್ಳಾರಿ: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಗಳು ಮೇ 21 ಮತ್ತು 22ರಂದು ನಡೆಯಲಿದ್ದು, ಯಾವುದೇ ಲೋಪ-ದೋಷ ಆಗದಂತೆ ಎಚ್ಚರ ವಹಿಸಿ ಎಂದು ಅಧಿಕಾರಿಗಳಿಗೆ ಡಿಸಿ ಪವನ್‌ಕುಮಾರ್ ಮಾಲಪಾಟಿ ಸೂಚನೆ ನೀಡಿದರು.

    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಸಂಜೆ ಆಯೋಜಿಸಿದ್ದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಗರದ 11 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಗಳಲ್ಲಿ ಯಾವುದೇ ರೀತಿಯ ಲೋಪಗಳಾಗಬಾರದು. ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

    ಸ್ಪರ್ಧಾತ್ಮಕ ಪರೀಕ್ಷೆಗೆ 2,317 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಎಲ್ಲ ಪರೀಕ್ಷಾ ಕೇಂದ್ರಗಳ ಕೊಠಡಿಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಬೇಕು. ಸಾಧ್ಯವಿರುವ ಪರೀಕ್ಷಾ ಕೇಂದ್ರಗಳಲ್ಲಿ ಮೆಟಲ್ ಡಿಟೆಕ್ಟರ್ ಅಳವಡಿಸಬೇಕು. ಪರೀಕ್ಷೆ ನಡೆಯುವ ದಿನದಂದು ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶವನ್ನು ನಿರ್ಭಂಧಿತ ಪ್ರದೇಶ ಎಂದು ಘೋಷಿಸಬೇಕು. ಪರೀಕ್ಷಾ ಸಮಯದಲ್ಲಿ ಜಿರಾಕ್ಸ್/ಸೈಬರ್ ಕೆಫೆ/ಕಂಪ್ಯೂಟರ್ ಸೆಂಟರ್‌ಗಳನ್ನು ಮುಚ್ಚಲು ಕ್ರಮಕೈಗೊಳ್ಳಬೇಕು ಎಂದರು.

    ಮೇ 21ರಂದು ಬೆಳಗ್ಗೆ 10ರಿಂದ ಮದ್ಯಾಹ್ನ 12.30ರವರೆಗೆ ಸಾಮಾನ್ಯ ಪತ್ರಿಕೆ-1, ಮಧ್ಯಾಹ್ನ 2.30ರಿಂದ ಸಂಜೆ 5.30ರವರೆಗೆ ಭಾಷೆ-ಆಂಗ್ಲ(ಪತ್ರಿಕೆ-2) ಪರೀಕ್ಷೆಗಳು ನಡೆಯಲಿವೆ. ಅದೇ ರೀತಿ ಮೇ 22ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಪತ್ರಿಕೆ-2(ಗಣಿತ ಮತ್ತು ವಿಜ್ಞಾನ, ಜೀವ ವಿಜ್ಞಾನ ಮತ್ತು ಸಮಾಜ ಪಾಠಗಳು) ಪರೀಕ್ಷೆ, ಮಧ್ಯಾಹ್ನ 3ರಿಂದ ಸಂಜೆ 5ರವರೆಗೆ ಭಾಷಾ ಸಾಮಾರ್ಥ್ಯ ಪರೀಕ್ಷೆ ನಡೆಯಲಿವೆ.
    | ಪವನ್‌ಕುಮಾರ್ ಮಾಲಪಾಟಿ, ಬಳ್ಳಾರಿ ಜಿಲ್ಲಾಧಿಕಾರಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts