More

    ಗುತ್ತಿಗೆ, ಹೊರಗುತ್ತಿಗೆ ಹಾಗೂ ಕಾಯಂ ನೌಕರರಿಗೆ ಸಮಾನ ವೇತನ ನೀಡಲು ಆಗ್ರಹ

    ಬಳ್ಳಾರಿ: ರಾಜ್ಯ ಸರ್ಕಾರಿ ನೌಕರರ ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ತಾಲೂಕು ಘಟಕದ ಪದಾಧಿಕಾರಿಗಳು ಗುರುವಾರ ಪ್ರತಿಭಟನೆ ನಡೆಸಿದರು.

    ತಾಲೂಕು ಘಟಕದ ಅಧ್ಯಕ್ಷ ಆಲಂಬಾಷಾ ಮಾತನಾಡಿ, ಎಲ್ಲ ಸರ್ಕಾರಿ ನೌಕರರಿಗೆ ಆದ್ಯತೆ ಮೇರೆಗೆ ಉಚಿತವಾಗಿ ಕೋವಿಡ್ ಲಸಿಕೆ ನೀಡಬೇಕು. ಸರ್ಕಾರ ಮುಟ್ಟುಗೋಲು ಹಾಕಿಕೊಂಡಿರುವ 18 ತಿಂಗಳ ತುಟ್ಟಿಭತ್ಯೆ ಹೆಚ್ಚಳದ ದರವನ್ನು ಬಿಡುಗಡೆಗೊಳಿಸಬೇಕು. ಪಿಎಫ್‌ಆರ್‌ಡಿಎ/ಎನ್‌ಪಿಎಸ್ ಪಿಂಚಣಿ ವ್ಯವಸ್ಥೆಯನ್ನು ರದ್ದುಗೊಳಿಸಿ ನಿಶ್ಚಿತ ಪಿಂಚಣಿ ವ್ಯವಸ್ಥೆ ಜಾರಿಗೊಳಿಸಬೇಕು. 50 ವರ್ಷ ಮೇಲ್ಪಟ್ಟ ಸರ್ಕಾರಿ ನೌಕರರ ನಿವೃತ್ತಿಯ ನೀತಿಯನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕು. ಗುತ್ತಿಗೆ, ಹೊರಗುತ್ತಿಗೆ ನೌಕರ, ಕಾಯಂ ನೌಕರರಿಗೆ ಸಮಾನ ವೇತನ ಭತ್ಯೆ ನೀಡುವುದು. ಹುದ್ದೆಗಳ ಕಡಿತ ಪ್ರಕ್ರಿಯೆ ಕೈಬಿಡಬೇಕು ಹಾಗೂ ಕರೊನಾ ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ 50ಲಕ್ಷ ರೂ. ಪರಿಹಾರ ಧನ ನೀಡಬೇಕೆಂದು ಒತ್ತಾಯಿಸಿದರು. ಪದಾಧಿಕಾರಿಗಳಾದ ಹನುಮಂತ, ರಾಮಕೃಷ್ಣ, ಉಮಾಶಂಕರ್, ವೆಂಕಟೇಶ್, ನಾಗರಾಜ, ಶರಣಪ್ಪ, ವಿಜಯಕುಮಾರ್, ಹೊನ್ನೂರುಸ್ವಾಮಿ, ಗುರುಸಿದ್ಧಮೂರ್ತಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts