More

    ಲಸಿಕೆ ಅಭಿಯಾನದಲ್ಲಿ ಮಹತ್ವದ ಮೈಲಿಗಲ್ಲು: ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರರೆಡ್ಡಿ ಅಭಿಮತ

    ಬಳ್ಳಾರಿ: ಕೊವಿಡ್ 19 ವಿರುದ್ಧದ ಲಸಿಕೆ ಅಭಿಯಾನದಲ್ಲಿ ಭಾರತ ಮಹತ್ವದ ಮೈಲಿಗಲ್ಲು ಸಾಧಿಸಿದ್ದು, ಇದರ ಶ್ರೇಯಸ್ಸು ಆರೋಗ್ಯ ಕಾರ್ಯಕರ್ತರಿಗೆ ಸಲ್ಲುತ್ತದೆ ಎಂದು ನಗರ ಶಾಸಕ ಜಿ.ಸೋಮಶೇಖರರೆಡ್ಡಿ ಹೇಳಿದರು.

    ಕೇವಲ ಒಂಬತ್ತು ತಿಂಗಳಲ್ಲಿ ಭಾರತ ಶತಕೋಟಿ ಲಸಿಕೆ ನೀಡಿ ಜಗತ್ತಿನಲ್ಲೇ ಮಹತ್ತರ ಸಾಧನೆ ಮಾಡಿದೆ. ದೇಶದಲ್ಲಿಯೇ ಕೋವಿಶೀಲ್ಡ್, ಕೋವ್ಯಾಕ್ಸಿನ್ ಲಸಿಕೆ ತಯಾರಿಕೆ ಮಾಡಿ, ಕಡಿಮೆ ಅವಧಿಯಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ಮೋದಿ ಸರ್ಕಾರ ಲಸಿಕೆ ನೀಡಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

    ಬಿಜೆಪಿ ಜಿಲ್ಲಾ ವಕ್ತಾರ ಡಾ.ಬಿ.ಕೆ.ಸುಂದರ್ ಮಾತನಾಡಿ,ಕೇಂದ್ರ ಸರ್ಕಾರ ಪ್ರತಿ ರಾಜ್ಯಕ್ಕೆ ಸಮರ್ಪಕವಾಗಿ ಹಂಚಿಕೆ ಮಾಡಿದ್ದರಿಂದ ಶತಕೋಟಿ ಲಸಿಕೆ ಸಾಧನೆ ಮಾಡಲು ಸಾಧ್ಯವಾಗಿದೆ. ಜಿಲ್ಲೆಯಲ್ಲಿ ಇನ್ನು ಹಲವರು ಲಸಿಕೆ ಪಡೆಯಬೇಕಿದೆ.

    ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯಲ್ಲಿ ಈವರೆಗೆ 16,88,163 ಮೊದಲ ಡೋಸ್, 7,51,279 ಎರಡನೇ ಡೋಸ್ ಸೇರಿದಂತೆ ಒಟ್ಟು 24,39,442 ಡೋಸ್ ನೀಡಲಾಗಿದೆ. ಸಾರ್ವಜನಿಕರು ಭಯಬಿಟ್ಟು ನಿರ್ಭೀತಿಯಿಂದ ಲಸಿಕೆ ಪಡೆದುಕೊಳ್ಳಿ ಎಂದರು. ರಾಬಕೊ ಒಕ್ಕೂಟದ ನಿರ್ದೇಶಕ ವೀರಶೇಖರರೆಡ್ಡಿ, ಮುಖಂಡರಾದ ಅನಿಲ್‌ನಾಯ್ಡು, ಇಬ್ರಾಹಿಂಬಾಬು ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts