More

    ದಾಸ ಪರಂಪರೆಯ ಶ್ರೇಷ್ಠ ಕನಕದಾಸ: ಶಾಸಕ ಜಿ.ಸೋಮಶೇಖರರೆಡ್ಡಿ ಬಣ್ಣನೆ

    ಬಳ್ಳಾರಿ: ಕುಲ-ಕುಲ ಎಂದು ಹೊಡೆದಾಡದಿರಿ. ದೇಹ, ಆತ್ಮ, ಗಾಳಿ, ನೀರು, ಬೆಳಕಿಗೆ ಯಾವ ಕುಲವಿದೆ ಎಂದು ತಿಳಿಸಿಕೊಟ್ಟ ಮಹಾನ್ ಸಂತ ದಾಸಶ್ರೇಷ್ಠ ಕನಕದಾಸರು. ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಆಳವಡಿಸಿಕೊಳ್ಳಬೇಕು ಎಂದು ಶಾಸಕ ಜಿ.ಸೋಮಶೇಖರರೆಡ್ಡಿ ಹೇಳಿದರು.

    ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಆಶ್ರಯದಲ್ಲಿ ಶುಕ್ರವಾರ ಡಾ.ರಾಜ್‌ಕುಮಾರ್ ರಸ್ತೆಯ ಬಿಡಿಎಎ ಫುಟ್ಬಾಲ್ ಮೈದಾನದ ಸಭಾಂಗಣದಲ್ಲಿ ಶ್ರೀ ಕನಕ ದಾಸರ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು. 15 ಮತ್ತು 16ನೇ ಶತಮಾನದ ಜನಪ್ರಿಯ ಭಕ್ತಿಪಂಥದ ಮುಖ್ಯ ಹರಿದಾಸರಲ್ಲಿ ಕನಕದಾಸರು ಒಬ್ಬರು. ದಾಸ ಸಾಹಿತ್ಯದಲ್ಲಿ ಜೀವನ ಪಾಠವನ್ನು ಕಂಡುಕೊಂಡವರು. ಕನಕದಾಸರನ್ನು ಕರ್ನಾಟಕ ಕೀರ್ತನ ಸಾಹಿತ್ಯದಲ್ಲಿ ಅಶ್ವಿನಿ ದೇವತೆಗಳಿಗೆ ಹೋಲಿಸಲಾಗುತ್ತದೆ ಎಂದರು.

    ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಕೆ.ಬಿ.ಸಿದ್ಧಲಿಂಗಪ್ಪ ಜಯಂತಿ ಕುರಿತು ವಿಶೇಷ ಉಪನ್ಯಾಸ ನೀಡಿದರು. ಕನಕದಾಸ ವೃತ್ತದಿಂದ ಬಿಡಿಎಎ ಮೈದಾನ ಸಭಾಂಗಣದ ವೇದಿಕೆಯ ಸಭಾಂಗಣದವರೆಗೆ ಜಯಂತಿಯ ಮೆರವಣಿಗೆ ಜರುಗಿತು. ವಿವಿಧ ಸಾಂಸ್ಕೃತಿಕ ಕಲಾತಂಡಗಳು ಗಮನಸೆಳೆದವು.

    ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ, ಮಹಾನಗರ ಪಾಲಿಕೆ ಮೇಯರ್ ಎಂ.ರಾಜೇಶ್ವರಿ, ಬುಡಾ ಅಧ್ಯಕ್ಷ ಮಾರುತಿ ಪ್ರಸಾದ್, ಜಿಪಂ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಜಿ.ಲಿಂಗಮೂರ್ತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಕುರುಬ ಸಮಾಜದ ಪ್ರಮುಖರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts