More

    ಸಂಡೂರು ಸ್ವಯಂಶಕ್ತಿ ಯೋಜನೆಯಡಿ ಹೆಚ್ಚು ವೃತ್ತಿಪರ ತರಬೇತಿ ಆಯೋಜಿಸಲು ಡಿಸಿ ನಕುಲ್ ಸೂಚನೆ

    ಬಳ್ಳಾರಿ: ಸಂಡೂರು ಸ್ವಯಂಶಕ್ತಿ ಯೋಜನೆಯಡಿ ಇನ್ನೂ ಹೆಚ್ಚಿನ ವಿವಿಧ ವೃತ್ತಿಪರ ತರಬೇತಿ ಆಯೋಜಿಸುವಂತೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಅಧಿಕಾರಿಗಳಿಗೆ ಸೂಚಿಸಿದರು.

    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಜಿಲ್ಲಾ ಖನಿಜ ಪ್ರತಿಷ್ಠಾನದಿಂದ ಹಮ್ಮಿಕೊಂಡಿದ್ದ ಸಂಡೂರು ಸ್ವಯಂಶಕ್ತಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಯೋಜನೆಯಡಿ ಸಂಡೂರು ತಾಲೂಕಿನ 26 ಗ್ರಾಮಗಳ 1078 ಯುವಕ, ಯುವತಿಯರಿಗೆ ಕಂಪ್ಯೂಟರ್ ತರಬೇತಿ ನೀಡಲಾಗುತ್ತಿದೆ. ತರಬೇತಿ ಪಡೆದವರಿಗೆ ಪ್ರಮಾಣಪತ್ರ, ಮೂರು ಸಾವಿರ ರೂ. ಗೌರವಧನ ಹಾಗೂ ಲ್ಯಾಪ್‌ಟಾಪ್ ನೀಡಲಾಗುವುದು ಎಂದು ತಿಳಿಸಿದರು.

    ಕಂಪ್ಯೂಟರ್ ತರಬೇತಿ ಪಡೆದವರು ಕಾಮನ್ ಸರ್ವೀಸ್ ಸೆಂಟರ್ ಸ್ಥಾಪನೆಗೆ ಒಲವು ತೋರುತ್ತಿದ್ದಾರೆ. ಆಸಕ್ತರಿಗೆ ಜಿಲ್ಲಾಡಳಿತದಿಂದ ನೀಡಲಾಗುವುದು. ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಸಂಡೂರು ತಾಲೂಕಿನ ಎಲ್ಲ ಗ್ರಾಮಗಳಲ್ಲಿ ಹೊಲಿಗೆ ತರಬೇತಿ ನೀಡಲಾಗುತ್ತಿದೆ. ತರಬೇತಿ ಪಡೆದ ಮಹಿಳೆಯರಿಗೆ ಅ.2ರಂದು ಹೊಲಿಗೆ ಯಂತ್ರ ಹಾಗೂ ಹೊಲಿಗೆಗೆ ಸಂಬಂಧಿಸಿದ ಕಚ್ಚಾವಸ್ತು ನೀಡಲಾಗುವುದು ಎಂದರು. ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಸೋಮಶೇಖರ ಬಂಕದ್, ಜಿಪಂ ಮುಖ್ಯ ಯೋಜನಾಧಿಕಾರಿ ಚಂದ್ರಶೇಖರ ಗುಡಿ, ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕ ವಿಠ್ಠಲರಾಜು ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts