More

    10ರಂದು ಎಸ್‌ಜಿ ಕಾಲೇಜಿನ ಅಮೃತಮಹೋತ್ಸವ: ವೀ.ವಿ.ಸಂಘದ ಅಧ್ಯಕ್ಷ ಎಚ್.ಎಂ.ಗುರುಸಿದ್ದಸ್ವಾಮಿ ವಿವರಣೆ

    ಬಳ್ಳಾರಿ: ನಗರದ ವೀರಶೈವ ವಿದ್ಯಾವರ್ಧಕ ಸಂಘದ ಪ್ರತಿಷ್ಠಿತ ಶೆಟ್ರ ಗುರುಶಾಂತಪ್ಪ ಸಂಯುಕ್ತ ಪದವಿ ಪೂರ್ವ ಕಾಲೇಜಿನ(ಎಸ್‌ಜಿ) ಅಮೃತ ಮಹೋತ್ಸವ ಮತ್ತು ದಾನಿಗಳ ದಿನಾಚರಣೆ ಡಿ.10 ರಂದು ಕಾಲೇಜಿನ ಆವರಣದಲ್ಲಿ ಅದ್ದೂರಿಯಾಗಿ ನಡೆಯಲಿದೆ ಎಂದು ವೀ.ವಿ.ಸಂಘದ ಅಧ್ಯಕ್ಷ ಎಚ್.ಎಂ.ಗುರುಸಿದ್ದಸ್ವಾಮಿ ಹೇಳಿದರು.

    ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿ, ಅಂದು ಉಜ್ಜಿನಿ ಸದ್ಧರ್ಮ ಸಿಂಹಾಸನಾಧೀಶ್ವರ ಸಿದ್ಧಲಿಂಗ ರಾಜದೇಶೀಕೇಂದ್ರ ಶಿವಾಚಾರ್ಯರು ಅಮೃತ ಮಹೋತ್ಸವ ಮತ್ತು ದಾನಿಗಳ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ. ಇದಕ್ಕೂ ಮುನ್ನ ಬೆಳಗ್ಗೆ 7.30ಕ್ಕೆ ವೀರಶೈವ ವಿದ್ಯಾವರ್ಧಕ ಸಂಘದ ಕಚೇರಿಯಿಂದ ಕಾಲೇಜಿನ ಆವರಣದವರೆಗೆ ವಿದ್ಯಾರ್ಥಿಗಳು, ಕಾಲೇಜಿನ ಸಿಬ್ಬಂದಿ ಮತ್ತು ಸಂಘದ ಆಜೀವ ಸದಸ್ಯರಿಂದ ಮೆರವಣಿಗೆ ನಡೆಯಲಿದೆ. ಬಳ್ಳಾರಿಯ ಕಲ್ಯಾಣ ಸ್ವಾಮಿ, ಘನ ಉಪಸ್ಥಿತಿ ಇರಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ‘ಅಮೃತ ಸಿರಿ’ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ.

    ಸಂಘದ ಮಾಜಿ ಅಧ್ಯಕ್ಷ, ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ರಾಜ್ಯ ಅಧ್ಯಕ್ಷ ಡಾ.ಎನ್.ತಿಪ್ಪಣ್ಣ ಅವರು ರಾಷ್ಟ್ರಪ್ರಶಸ್ತಿ ಪುರಸ್ಕೃತ ಮುಖ್ಯೋಪಾಧ್ಯಾಯ ಲಿಂಗೈಕ್ಯ ಶ್ರೀ ಮಂಗಾಪುರದ ಚನ್ನಬಸಯ್ಯ ಅವರ ‘ಬದುಕು ಮತ್ತು ವ್ಯಕ್ತಿತ್ವ’ದ ಕುರಿತು ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಲಿದ್ದಾರೆ. ಬಳಿಕ ಸಂಜೆ ಸಮಾರೋಪದ ಸಾನ್ನಿಧ್ಯವನ್ನು ಜಗದ್ಗುರು ಕೊಟ್ಟೂರು ಬಸವಲಿಂಗ ಸ್ವಾಮೀಜಿ ವಹಿಸಲಿದ್ದು, ಎಮ್ಮಿಗನೂರು ಹಂಪಿ ಸಾವಿರ ದೇವರ ಸಂಸ್ಥಾನ ಮಠದ ವಾಮದೇವ ಮಹಾಂತ ಶಿವಾಚಾರ್ಯ ಸ್ವಾಮೀಜಿ ಇರಲಿದ್ದು, ವಿವಿಧ ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts