More

    ಬಿಸಿಲೂರು ಬಳ್ಳಾರಿ ಜಿಲ್ಲೆಯಲ್ಲಿ ಡೆಂಘೆ ದಾಂಗುಡಿ

    ಬಳ್ಳಾರಿ: ಬಿಸಿಲೂರು ಬಳ್ಳಾರಿ ಜಿಲ್ಲೆಯಲ್ಲಿ ಡೆಂಘೆ ದಾಂಗುಡಿ ಇಟ್ಟಿದೆ. ಕಳೆದ ನಾಲ್ಕು ವರ್ಷದಲ್ಲಿ ಸಾವಿರ ಗಡಿಯಲ್ಲಿ ಪ್ರಕರಣಗಳು ದಾಖಲಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ.

    ಕರೊನಾ ಮಹಾಮಾರಿಯಿಂದ ಚೇತರಿಸಿಕೊಳ್ಳುತ್ತಿರುವ ದಿನಗಳಲ್ಲಿ ಸಾಂಕ್ರಾಮಿಕ ಡೆಂಘೆ ಲಗ್ಗೆ ಇಟ್ಟಿದ್ದು, ಕಳೆದ ಜನವರಿಯಿಂದ ಏಪ್ರಿಲ್‌ವರೆಗೆ 63 ಖಚಿತ ಪ್ರಕರಣಗಳು ಬೆಳಕಿಗೆ ಬಂದಿವೆ.

    ನಾಲ್ಕು ವರ್ಷದಲ್ಲಿ 914 ಕೇಸ್ ದೃಢ

    2020ನೇ ಸಾಲಿನಿಂದ ಈವರೆಗೆ 914 ಡೆಂಘೆ ಪ್ರಕರಣಗಳು ಖಚಿತವಾಗಿವೆ. 2020ರಲ್ಲಿ 3014 ಸಂಶಯಾಸ್ಪದ ಪ್ರಕರಣಗಳು ಕಂಡುಬಂದಿದ್ದು, 250 ಜನರಿಗೆ ಸೋಂಕು ದೃಢವಾಗಿತ್ತು. ಅದರಂತೆ 2021ರಲ್ಲಿ 4605 ಸಂಶಯಾಸ್ಪದ, 405 ಖಚಿತ ಪ್ರಕರಣಗಳು ದಾಖಲಾಗಿದ್ದವು.

    ಕಳೆದ ವರ್ಷ 6514 ಜನರಲ್ಲಿ ಡೆಂಘೆ ಸಂಶಯಾಸ್ಪದ ಪ್ರಕರಣಗಳು ಬೆಳಕಿಗೆ ಬಂದಿದ್ದು, 196 ಜನರಿಗೆ ಡೆಂಘೆ ಇರುವುದು ಆರೋಗ್ಯ ಇಲಾಖೆ ಮಾಹಿತಿಯಿಂದ ತಿಳಿದು ಬಂದಿದೆ. ಪ್ರಸಕ್ತ ಸಾಲಿನ ಜನವರಿಯಿಂದ ಏಪ್ರಿಲ್ ವರೆಗೆ 1372 ಸಂಶಯಾಸ್ಪದ ಡೆಂಘೆ ಪ್ರಕರಣಗಳು ಕಂಡು ಬಂದಿದ್ದು, 63 ಜನರಲ್ಲಿ ಸೋಂಕು ಇರುವುದು ದೃಢವಾಗಿದೆ.

    ಇದನ್ನೂ ಓದಿ: ಜಿಲ್ಲೆಯಲ್ಲಿ 26 ಡೆಂಘೆ ಪ್ರಕರಣ

    ರೋಗ ನಿಯಂತ್ರಣಕ್ಕೆ ಕ್ರಮಗಳೇನು?

    ಮನೆಯಲ್ಲಿ ತೊಟ್ಟಿ, ಬ್ಯಾರೆಲ್, ಡ್ರಮ್‌ಗಳಲ್ಲಿನ ನೀರನ್ನು ವಾರಕ್ಕೊಮ್ಮೆ ಖಾಲಿ ಮಾಡಿ ಸ್ವಚ್ಛಗೊಳಿಸಬೇಕು. ಅವುಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಎಚ್ಚರ ವಹಿಸಬೇಕು. ಮನೆ ಸುತ್ತ ಬಿಸಾಡಿರುವ ವಸ್ತುಗಳಲ್ಲಿ ಮಳೆ ನೀರು ಶೇಖರಣೆಯಾಗದಂತೆ ನೋಡಿಕೊಳ್ಳಬೇಕು. ಎಲ್ಲ ಸರ್ಕಾರಿ/ಖಾಸಗಿ ಕಚೇರಿ ಹಾಗೂ ಸಂಸ್ಥೆಗಳ ಒಳಾಂಗಣ ಹಾಗೂ ಹೊರಾಂಗಣಗಳಲ್ಲಿ ಈಡೀಸ್ ಸೊಳ್ಳೆಯ ಉತ್ಪತ್ತಿ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು.

    ಈಡೀಸ್ ಸೊಳ್ಳೆಗಳು ಹಗಲು ಹೊತ್ತಿನಲ್ಲಿ ಕಚ್ಚುವುದರಿಂದ ವಿಶೇಷವಾಗಿ ಮಕ್ಕಳು, ವೃದ್ಧರು ಹಾಗೂ ಗರ್ಭಿಣಿಯರು ಸೊಳ್ಳೆ ಪರದೆ ಬಳಸಬೇಕು. ಆರೋಗ್ಯ ಕಾರ್ಯಕರ್ತೆಯರು ಹಾಗೂ ಆಶಾ ಸ್ವಯಂಸೇವಕರು ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಡೆಂೆ ನಿಯಂತ್ರಣಕ್ಕೆ ಸಂಬಂಧಿಸಿ ಕೊಡುವ ಸಲಹೆಗಳನ್ನು ತಪ್ಪದೆ ಪಾಲಿಸಬೇಕು.

    ಕಾಯಿಲೆ ಲಕ್ಷಣಗಳೇನು?

    ಈಡೀಸ್ ಈಜಿಪೈ ಸೊಳ್ಳೆ ಕಡಿತದಿಂದ ಹರಡುವ ಡೆಂಘೆ ಜ್ವರವು ವೈರಾಣುಗಳಿಂದ ಉಂಟಾಗುತ್ತದೆ. ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣಿನ ಹಿಂಭಾಗದಲ್ಲಿ ನೋವು, ಮಾಂಸಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು, ವಾಕರಿಕೆ, ವಾಂತಿ, ರಕ್ತಸ್ರಾವ, ಒಸಡುಗಳಲ್ಲಿ ರಕ್ತಸ್ರಾವ ಲಕ್ಷಣಗಳು ಕಂಡು ಬರುತ್ತವೆ.

    ಅಂತಹ ಲಕ್ಷಣಗಳು ಕಂಡು ಬಂದರೆ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರಕ್ತಪರೀಕ್ಷೆ ಮಾಡಿಸಿಕೊಂಡು ಚಿಕಿತ್ಸೆ ಪಡೆಯಬೇಕು ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಆರ್.ಅಬ್ದುಲ್ಲಾ ಸಲಹೆ ತಿಳಿಸಿದ್ದಾರೆ.

    ಜಿಲ್ಲಾಡಳಿತದಿಂದ ಜಾಗೃತಿ ಅಭಿಯಾನ

    ರಾಷ್ಟ್ರೀಯ ಡೆಂೆ ದಿನದ ಅಂಗವಾಗಿ ಬಳ್ಳಾರಿ ನಗರದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಜಾಗೃತಿ ಅಭಿಯಾನ ಏರ್ಪಡಿಸಲಾಗಿತ್ತು. ‘ಎಲ್ಲರ ಸಹಭಾಗಿತ್ವದೊಂದಿಗೆ ಡೆಂೆಯನ್ನು ಸೋಲಿಸೋಣ’ ಎಂಬ ಘೋಷವಾಕ್ಯದೊಂದಿಗೆ ಹಮ್ಮಿಕೊಂಡಿದ್ದ ಅಭಿಯಾನಕ್ಕೆ ಡಿಎಚ್‌ಒ ಡಾ.ಎಚ್.ಎಲ್.ಜನಾರ್ದನ ಚಾಲನೆ ನೀಡಿದರು.

    ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಎನ್.ಬಸರೆಡ್ಡಿ, ಕುಟುಂಬ ಕಲ್ಯಾಣ ಕಾರ್ಯಕ್ರಮ ಅಧಿಕಾರಿ ಡಾ.ಪೂರ್ಣಿಮಾ ಕಟ್ಟಿಮನಿ, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ವೀರೇಂದ್ರ ಕುಮಾರ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ ಮತ್ತು ಶಾಂತಮ್ಮ ಇತರರು ಪಾಲ್ಗೊಂಡಿದ್ದರು.

    ಮುಂಬರುವ ಮಳೆಗಾಲ ಹಾಗೂ ನಂತರದ ದಿನಗಳಲ್ಲಿ ಡೆಂೆ ನಿಯಂತ್ರಣ ಕ್ರಮಗಳನ್ನು ಸಮುದಾಯ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಮೂಲಕ ಡೆಂೆ ಕಾಯಿಲೆ ನಿಯಂತ್ರಣ ಮಾಡಲಾಗುವುದು.
    ಡಾ.ಎಚ್.ಎಲ್.ಜನಾರ್ದನ, ಡಿಎಚ್‌ಒ, ಬಳ್ಳಾರಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts