23.2 C
Bangalore
Saturday, December 14, 2019

ಅಂಗವಿಕಲರ ಬಗ್ಗೆ ಅಧಿಕಾರಿಗಳ ದೃಷ್ಟಿಕೋನ ಬದಲಾಗಲಿ – ಅಧಿನಿಯಮದ ಆಯುಕ್ತ ವಿ.ಎಸ್.ಬಸವರಾಜ ಹೇಳಿಕೆ

Latest News

ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಿ

ಯಾದಗಿರಿ: ಸಂಪೂರ್ಣ ಲಸಿಕೆ ಪಡೆಯುವುದು ಪ್ರತಿ ಮಗುವಿನ ಜನ್ಮಸಿದ್ಧ ಹಕ್ಕು ಹಾಗೂ ಲಸಿಕೆಯನ್ನು ಕೊಡಿಸುವುದು ಪೋಷಕರ ಕರ್ತವ್ಯ ಕೂಡ ಆಗಿದೆ ಎಂದು ಕಿರಿಯ...

ಹಿರಿಯ ವಕೀಲರನ್ನು ಗೌರವದಿಂದ ಕಾಣಿ

ಯಾದಗಿರಿ : ಕಿರಿಯ ವಕೀಲರು ಹಿರಿಯ ವಕೀಲರನ್ನು ಗೌರವದಿಂದ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾ ನೂತನ ಆಡಳಿತಾತ್ಮಕ ನ್ಯಾಯಮೂರ್ತಿ ಅಶೋಕ...

16 ಯುವಕರ ಮೇಲೆ ಪ್ರಕರಣ ದಾಖಲು

ಬಾದಾಮಿ: ದ್ವಿಚಕ್ರ ವಾಹನಕ್ಕೆ ಹಾದು ಹೋಗಲು ಅವಕಾಶ ನೀಡಲಿಲ್ಲ ಎಂಬ ಕ್ಷುಲಕ ಕಾರಣಕ್ಕೆ ಇಬ್ಬರು ಯುವಕರ ಮಧ್ಯೆ ಆರಂಭವಾದ ಜಗಳ ಶನಿವಾರ ವಿಕೋಪಕ್ಕೆ...

ಮೆಟ್ರೋಗೆ ಹಾರಿ ಗಂಡ ಮೃತಪಟ್ಟ ಒಂದು ಗಂಟೆಯಲ್ಲೇ ಮನೆಯಲ್ಲಿ ನೇಣು ಬಿಗಿದುಕೊಂಡ ಹೆಂಡತಿ, ಮಗಳು!

ನವದೆಹಲಿ: ಗಂಡ ಮೆಟ್ರೋಗೆ ಹಾರಿ ಮೃತಪಟ್ಟ ಗಂಟೆಯೊಳಗೆ ಮನೆಯಲ್ಲಿ ಹೆಂಡತಿ ಮತ್ತು ಮಗಳು ನೇಣು ಹಾಕಿಕೊಂಡು ಮೃತಪಟ್ಟಿದ್ದಾರೆ. ದೆಹಲಿಯ ಜವಹರ ಲಾಲ್​ ನೆಹರು ಮೆಟ್ರೋ ನಿಲ್ದಾಣದಲ್ಲಿ ಬೆಳಗ್ಗೆ...

ನಾಡು-ನುಡಿ ರಕ್ಷಣೆಗೆ ಸೇವಾ ಮನೋಭಾವ ಅಗತ್ಯ

ಜಗಳೂರು: ಜಗಳೂರಿನಲ್ಲಿ ರಾಜ್ಯ ಮಟ್ಟದ ಯುವಜನ ಮೇಳ ಆಯೋಜಿಸುವ ಚಿಂತನೆ ಇದೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ ಎನ್‌ಎಂಕೆ ಪ್ರೌಢಶಾಲೆ ಸಭಾಂಗಣದಲ್ಲಿ...

ಬಳ್ಳಾರಿ: ಅಂಗವಿಕಲರಿಗೆ ಚಿಕಿತ್ಸೆಯೇ ಪರಿಹಾರವಲ್ಲ. ಪುನರ್ವಸತಿ ಕಲ್ಪಿಸಿದರೆ ಸಬಲೀಕರಣಗೊಂಡು ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತದೆ ಎಂದು ಅಂಗವಿಕಲರ ಅಧಿನಿಯಮದ ರಾಜ್ಯ ಆಯುಕ್ತ ವಿ.ಎಸ್.ಬಸವರಾಜ ಹೇಳಿದರು.

ಈ ಮೊದಲು ಅಂಗವಿಕಲರಿಗೆ ಅನುಕಂಪ ತೋರಿಸಲಾಗುತ್ತಿತ್ತು. ಅಂಗವಿಕಲರಿಗೆ ಸೌಲಭ್ಯ ಕಲ್ಪಿಸುವುದು ನಮ್ಮ ಜವಾಬ್ದಾರಿಯಲ್ಲ ಎಂಬ ಭಾವನೆ ಇತ್ತು. 2016ರಲ್ಲಿ ಅಂಗವಿಕಲರ ಅಧಿನಿಯಮ ಜಾರಿಯಾದ ಬಳಿಕ ಅಂಗವಿಕಲರ ಕುರಿತ ಮನೋಭಾವನೆ ಬದಲಾಗಿದೆ. ಅಂಗವಿಕಲರಿಗೆ ಸೌಲಭ್ಯ ಕಲ್ಪಿಸುವುದು ಎಲ್ಲ ಇಲಾಖೆಗಳ ಜವಾಬ್ದಾರಿಯಾಗಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಸರ್ಕಾರದಿಂದ ಅಂಗವಿಕಲರಿಗೆ ಪೂರಕವಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಅಂಗವಿಕಲರಿಗೆ ಪುನರ್ವಸತಿ ಕಲ್ಪಿಸುವ ಬಗ್ಗೆ ಅಧಿಕಾರಿಗಳ ದೃಷ್ಟಿಕೋನ ಬದಲಾಗಬೇಕಿದೆ. ಸರ್ಕಾರದ ಯೋಜನೆಗಳನ್ನು ಬಳಸಿಕೊಂಡು ಜಿಲ್ಲೆಯಲ್ಲಿ ತಾಲೂಕುವಾರು ಯೋಜನೆ ರೂಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಪಂ ಸಿಇಒ ತಿಳಿಸಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಅಂಗವಿಕಲರಿಗೆ ಇನ್ನೂ ಹೆಚ್ಚಿನ ಸೌಲಭ್ಯಗಳು ಸಿಗುವ ವಿಶ್ವಾಸ ಇದೆ ಎಂದರು.

ದಾವಣಗೆರೆಯಲ್ಲಿ ಅಂಗವಿಕಲರಿಗೆ ಸಂಬಂಧಿಸಿದ ಮೂರು ಕೋರ್ಸ್‌ಗಳನ್ನು ಹೊಂದಿರುವ ಸಮಗ್ರ ಪುನರ್ವಸತಿ ಕೇಂದ್ರ ಆರಂಭವಾಗುತ್ತಿದೆ. ಅಂಗವಿಕಲರು ಸೇರಿದಂತೆ ಪಿಯುಸಿ ಉತ್ತೀರ್ಣರಾದವರು ಈ ಕೇಂದ್ರದಲ್ಲಿ ಅಧ್ಯಯನ ಮಾಡಬಹುದಾಗಿದೆ. ಶೀಘ್ರದಲ್ಲಿ ಜಿಲ್ಲಾ ಮಟ್ಟದಲ್ಲಿ ಅಂಗವಿಕಲರ ಸಲಹಾ ಸಮಿತಿ ರಚನೆಯಾಗಲಿದೆ ಎಂದು ವಿ.ಎಸ್.ಬಸವರಾಜ ಹೇಳಿದರು.

ಅಂಗವಿಕಲರ ಅಧಿನಿಯಮದ ರಾಜ್ಯ ಸಲಹಾ ಸಮಿತಿ ಸದಸ್ಯ ಬಿ.ಹಂಪಣ್ಣ ಮಾತನಾಡಿ, 2011ರ ಜನಗಣತಿ ಪ್ರಕಾರ ದಕ್ಷಿಣ ಕರ್ನಾಟಕದ ಜಿಲ್ಲೆಗಳಿಗೆ ಹೋಲಿಸಿದರೆ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಅಂಗವಿಕಲರ ಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿದೆ. ಅಂಗವಿಕಲರಿಗೆ ಪ್ರತ್ಯೇಕ ಉದ್ಯೋಗ ಖಾತ್ರಿ ಕಾರ್ಡ್ ಕೊಟ್ಟು ವರ್ಷದಲ್ಲಿ 100 ದಿನ ಕೆಲಸ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

Stay connected

278,753FansLike
588FollowersFollow
627,000SubscribersSubscribe

ವಿಡಿಯೋ ನ್ಯೂಸ್

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...

VIDEO| ಹರ್ಷಿಕಾ ಪೂಣಚ ಅವರ ಕುತ್ತಿಗೆಗೆ ಸುತ್ತುವರಿದ ಹಾವು…!: ಟ್ವಿಟರ್​ನಲ್ಲಿ...

ಬೆಂಗಳೂರು: ಸದಾ ಸಕ್ರಿಯರಾಗಿರುವ ಚಿತ್ರನಟಿ ಹರ್ಷಿಕಾ ಪೂಣಚ ಅವರ ಟ್ವಿಟರ್ ಅಕೌಂಟ್​ನಲ್ಲಿ ಶನಿವಾರ ಒಂದು ವಿಡಿಯೋ ಅಪ್ಲೋಡ್ ಆಗಿದ್ದು, ಅದರಲ್ಲಿ ಅವರ ವಿಯೆಟ್ನಾಂ ಅನುಭವದ ಒಂದು ಅಂಶ ಬಹಿರಂಗವಾಗಿದೆ. ಹರ್ಷಿಕಾ ಪೂಣಚ...

VIDEO| ನಟ ರಿಷಿ ಅಭಿನಯದ “ಸಾರ್ವಜನಿಕರಿಗೆ ಸುವರ್ಣಾವಕಾಶ” ಚಿತ್ರದ ರೊಮ್ಯಾಂಟಿಕ್​...

ಬೆಂಗಳೂರು: "ಆಪರೇಷನ್​ ಅಲಮೇಲಮ್ಮ" ಚಿತ್ರ ಖ್ಯಾತಿಯ ನಟ ರಿಷಿ ಅಭಿನಯದ ಹೊಚ್ಚ ಹೊಸ "ಸಾರ್ವಜನಿಕರಿಗೆ ಸುವರ್ಣಾವಕಾಶ" ಸಿನಿಮಾದ ಲಿರಿಕಲ್​ ವಿಡಿಯೋ ಸಾಂಗ್​ ಶುಕ್ರವಾರ ಬಿಡುಗಡೆಯಾಗಿದ್ದು ಯೂಟ್ಯೂಬ್​ನಲ್ಲಿ ಸಂಚಲನ ಸೃಷ್ಟಿಸಿದೆ. ಡಿಸೆಂಬರ್​ 20ಕ್ಕೆ...