More

    ಜಿಲ್ಲಾಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶುಶ್ರೂಷಕನಿಗೆ ಕರೊನಾ

    ಬಳ್ಳಾರಿ: ಕರೊನಾ ಸೋಂಕು ಜಿಲ್ಲಾಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶುಶ್ರೂಷಕನಿಗೂ ಆಗಿದ್ದು, ಕರೊನಾ ವಾರಿಯರ್ಸ್​ ನಡುವೆ ಕಳವಳಕ್ಕೆ ಕಾರಣವಾಗಿದೆ. ಜಿಲ್ಲಾ ಆಸ್ಪತ್ರೆಯಲ್ಲಿ 14 ದಿನಗಳ ಕೆಲಸ ಮಾಡಿದ ಬಳಿಕ ಶುಶ್ರೂಷಕ 14 ದಿನದ ಹೋಟೆಲ್ ಕ್ವಾರಂಟೈನ್ ನಲ್ಲಿದ್ದ. ಇದೇ ವೇಳೆ ಆತನನ್ನು ಕರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಸೋಮವಾರ ರಾತ್ರಿ ಸೋಂಕು ದೃಢವಾಗಿದೆ. ಸದ್ಯ ರೋಗದ ಯಾವುದೇ ಲಕ್ಷಣಗಳಿಲ್ಲ. ಸೋಂಕಿತ ಶುಶ್ರೂಷಕನನ್ನು ಕೂಡಲೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

    ಇದನ್ನೂ ಓದಿ: ಎಸ್ಸೆಸ್ಸೆಲ್ಸಿ ಎಕ್ಸಾಂ ಕಸಿವಿಸಿ

    ಜಿಲ್ಲೆಯಲ್ಲಿ ಕರೊನಾ ವಾರಿಯರ್ ಗೆ ಸೋಂಕು ತಗುಲಿದ ಮೊದಲ ಪ್ರಕರಣ ಇದಾಗಿದೆ. ಸೋಂಕಿತ ಕ್ವಾರಂಟೈನ್ ನಲ್ಲಿದ್ದ ಹಿನ್ನೆಲೆಯಲ್ಲಿ ಕಂಟೇನ್ಮೆಂಟ್ ಪ್ರದೇಶ ಘೋಷಣೆಯಿಲ್ಲ. ಪಿಪಿಇ ಕಿಟ್ ಸೇರಿದಂತೆ ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಶುಶ್ರೂಷಕ ಕಾರ್ಯನಿರ್ವಹಿಸಿದ್ದ. ಇದರಿಂದಾಗಿ ಸೋಂಕು ಹೇಗೆ ತಗುಲಿತು ಎಂಬುದರ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಳಿದ್ದಾರೆ.

    ಇದನ್ನೂ ಓದಿ: 1974ರಿಂದ ತಿಮ್ಮಪ್ಪನ 126 ಆಸ್ತಿ ಮಾರಾಟ

    ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 37ಕ್ಕೆ ಏರಿಕೆ. 15 ಜನರು ಗುಣಮುಖರಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ. 21 ಸಕ್ರಿಯ ಪ್ರಕರಣಗಳಿವೆ. ಇಬ್ಬರು ಸೋಂಕಿತರು ಗುಣಮುಖರಾಗಿದ್ದು ಇಂದು ಆಸ್ಪತ್ರೆಯಿಂದ ಬಿಡುಗಡೆ ನಿರೀಕ್ಷೆ ಇದೆ. ಬೆಂಗಳೂರಿನಿಂದ ಮರಳಿದ್ದ ಕಂಪ್ಲಿಯ ಕೂಲಿ ಕಾರ್ಮಿಕ ಹಾಗೂ ಸಿರಗುಪ್ಪ ತಾಲೂಕಿನ ಗೊಸಬಾಳ ಗ್ರಾಮದ ಯುವತಿ ಬಿಡುಗಡೆಯಾಗುವ ಸಾಧ್ಯತೆ ಇದೆ.

    ಕೊನೆಗೂ ಬಯಲಾಯಿತು ವಾರಂಗಲ್ ಕೃಷಿ ಹೊಂಡದ 9 ಶವಗಳ ರಹಸ್ಯ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts