ಪರಿಸರ ಮಾಲಿನ್ಯ ತಡೆಗಟ್ಟಲು ಮುಂದಾಗಿ

ವಿದ್ಯಾರ್ಥಿಗಳಿಗೆ ಡಿಡಿಪಿಯು ಕೆ.ತಿಮ್ಮಪ್ಪ ಸಲಹೆ ಜಾಗೃತಿ ಜಾಥಾ

ಬಳ್ಳಾರಿ: ಅರಣ್ಯ ನಾಶದ ಜತೆಗೆ ಪರಿಸರ ಮಾಲಿನ್ಯ ತಡೆಗಟ್ಟುವಲ್ಲಿ ವಿದ್ಯಾರ್ಥಿಗಳ ಪಾತ್ರ ಪ್ರಮುಖವಾಗಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೆ.ತಿಮ್ಮಪ್ಪ ಹೇಳಿದರು.

ತಾಲೂಕಿನ ಮೋಕಾ ಗ್ರಾಮದ ಸಪ ಪೂರ್ವ ಕಾಲೇಜಿನಲ್ಲಿ ಇಕೋ ಕ್ಲಬ್‌ನಿಂದ ಹಮ್ಮಿಕೊಂಡಿದ್ದ ಪರಿಸರ ಸಂರಕ್ಷಣೆ ಮತ್ತು ಸಾವಯವ ಕೃಷಿ ಕುರಿತು ಜಾಗೃತಿ ಮೂಡಿಸುವ ವಿದ್ಯಾರ್ಥಿಗಳ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.

ಹಗರಿ ಕೃಷಿ ಸಂಶೋಧನಾ ಕೇಂದ್ರದ ಹಿರಿಯ ಕೃಷಿ ವಿಜ್ಞಾನಿ ಡಾ.ರವಿಶಂಕರ್ ಮಾತನಾಡಿ, ಸಾವಯವ ಕೃಷಿಯಿಂದ ಆರೋಗ್ಯ ವೃದ್ಧಿಸುತ್ತದೆ. ರಸಗೊಬ್ಬರ ಮತ್ತು ಕೀಟನಾಶಕಗಳ ಬದಲಾಗಿ ಜೈವಿಕ ಎರೆಹುಳು ಗೊಬ್ಬರ ಬಳಸುವ ಮೂಲಕ ಮಣ್ಣಿನ ಮಾಲಿನ್ಯ ತಡೆಗಟ್ಟಬೇಕು ಎಂದರು.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಡಿ.ಶಿವಮೂರ್ತಿ ಮಾತನಾಡಿದರು. ಜೀವವೈವಿಧ್ಯತೆ ಸಂರಕ್ಷಣೆ ಸಂಘದ ಅಧ್ಯಕ್ಷ ಜಿ.ವಿಷ್ಣುಮೂರ್ತಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಕಾರ್ಯಕ್ರಮದ ನಿಮಿತ್ತ ನಡೆದ ಪ್ರಬಂಧ ಮತ್ತು ಘೋಷಣೆ ಸ್ಪಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಪ್ರಾಚಾರ್ಯ ಹನುಮಂತರೆಡ್ಡಿ ಅಧ್ಯಕ್ಷತೆವಹಿಸಿದ್ದರು. ಕಾರ್ಯಕ್ರಮದ ಸಂಯೋಜಕ ನಾಗೇಶ್ವರರಾವ್, ಎಂ.ಸಿ.ರಂಗನಾಥ, ನಟರಾಜ್, ಸ್ವಪ್ನಾ ಇತರರಿದ್ದರು.