More

    ಇಎಸ್‌ಐ ಆಸ್ಪತ್ರೆ ನಿರ್ಮಾಣಕ್ಕೆ ಸ್ಥಳ ಗುರುತು

    ಬಳ್ಳಾರಿ: ಜಿಲ್ಲೆಯಲ್ಲಿ ಬಹುದಿನಗಳ ಬೇಡಿಕೆಯಾದ ಇಎಸ್‌ಐ ಆಸ್ಪತ್ರೆ ನಿರ್ಮಾಣಕ್ಕೆ ಸ್ಥಳ ಗುರುತಿಸಿದ್ದು, ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ತಿಳಿಸಿದರು.

    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾನುವಾರ ಹಿರಿಯ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದರು.

    ಕಾರ್ಮಿಕರ ಕಾಯ್ದೆ, ಕಾನೂನಿನನ್ವಯ ಸರ್ಕಾರದ ಎಲ್ಲ ಸೌಲಭ್ಯಗಳನ್ನು ಒದಗಿಸುವ ಮೂಲಕ ಅವರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಬಾಲ ಕಾರ್ಮಿಕ ಪದ್ಧತಿ ಸಂಪೂರ್ಣ ನಿರ್ಮೂಲನೆಗೆ ವಿವಿಧ ಇಲಾಖೆಗಳು, ಸಂಘ ಸಂಸ್ಥೆಗಳು ಮತ್ತು ಮಾಧ್ಯಮಗಳ ಮೂಲಕ ಹೆಚ್ಚು ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ಗ್ಯಾರೇಜ್, ಅಂಗಡಿ, ಹೋಟೆಲ್ ಸೇರಿ ಇತರೆಡೆ ದಾಳಿ ಮಾಡಿ ಮಕ್ಕಳನ್ನು ರಕ್ಷಿಸುವುದರೊಂದಿಗೆ ಶೈಕ್ಷಣಿಕವಾಗಿ ಮುನ್ನೆಲೆಗೆ ತರಬೇಕು. ಬಾಲಕಾರ್ಮಿಕರನ್ನು ಗುರುತಿಸುವ ಸಲುವಾಗಿ ಅಸ್ತಿತ್ವದಲ್ಲಿರುವ ವಿಶೇಷ ಕಾರ್ಯಪಡೆಗಳನ್ನು ಸಕ್ರಿಯಗೊಳಿಸಬೇಕು ಎಂದು ಸೂಚಿಸಿದರು.

    ಕಾರ್ಖಾನೆಗಳಲ್ಲಿ ಕಾರ್ಮಿಕರ ಕಾಯ್ದೆ ಅನ್ವಯ ಇರುವ ನಿಯಮಗಳನ್ನು ಫಲಕಗಳಲ್ಲಿ ಪ್ರದರ್ಶಿಸಬೇಕು. ಮೂರು ತಿಂಗಳಿಗೊಮ್ಮೆ ಕಾರ್ಮಿಕರಿಗೆ ನೀಡುವ ಸೌಲಭ್ಯಗಳ ಕುರಿತು, ಖುದ್ದು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಮಾಸಿಕ ವೇತನ ಪಾವತಿ, ಪಿಎಫ್, ಇಎಸ್‌ಐ ಸೌಲಭ್ಯಗಳ ಮಾಹಿತಿಯನ್ನು ತಪ್ಪದೆ ಅವರಿಗೆ ತಿಳಿಸಬೇಕು ಎಂದು ಅಧಿಕಾರಿಗಳಿಗೆ ಸಂತೋಷ್ ಲಾಡ್ ತಿಳಿಸಿದರು.ಇಲಾಖೆಯ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಕಾರ್ಮಿಕರು ಅಲೆದಾಡವಂತಾಗಿದೆ. ಅಧಿಕಾರಿಗಳ ಹಂತದಲ್ಲಿಯೇ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದರು.

    ಸಿರಗುಪ್ಪ ತಾಲೂಕಿನಲ್ಲಿ 11 ಅಕ್ಕಿಗಿರಣಿಗಳಿವೆ. ಅಲ್ಲಿ ಕೂಲಿ ಕಾರ್ಮಿಕರ ಸಂಖ್ಯೆ ಹೆಚ್ಚಿದ್ದು, ಅವರ ಆರೋಗ್ಯ ರಕ್ಷಣೆಗೆ ಇಎಸ್‌ಐ ಆಸ್ಪತ್ರೆ ನಿರ್ಮಿಸಬೇಕು ಎಂದು ಶಾಸಕ ಬಿ.ಎಂ.ನಾಗರಾಜ್, ಸಭೆಯಲ್ಲಿ ಪ್ರಸ್ತಾಪಿಸಿದರು. ಇದಕ್ಕೆ ಸಚಿವರು, ಈ ಕುರಿತು ಸರ್ಕಾರದ ಗಮನ ಸೆಳೆಯಲಾಗುವುದು ಎಂದರು. ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ ಇತರರು ಹಾಜರಿದ್ದರು.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts