More

    ಕಾಡು ರಕ್ಷಣೆಗೆ ಅರಣ್ಯ ಸಿಬ್ಬಂದಿ ಹೋರಾಟ: ಬಳ್ಳಾರಿ ಜಿಲ್ಲಾಧಿಕಾರಿ ಪವನ್‌ಕುಮಾರ್ ಮಾಲಪಾಟಿ ಹೇಳಿಕೆ

    ಬಳ್ಳಾರಿ: ವನ್ಯಜೀವಿ ಹಾಗೂ ಕಾಡು ರಕ್ಷಣೆಗೆ ಜೀವ ಮುಡುಪಿಟ್ಟ ಹುತಾತ್ಮರ ನೆನಪು ಮಾಡಿಕೊಳ್ಳುವುದರ ಜತೆಗೆ ಅವರ ಕುಟುಂಬದ ನೆರವಿಗೆ ನಿಲ್ಲುವುದು ಎಲ್ಲರ ಕರ್ತವ್ಯ ಎಂದು ಜಿಲ್ಲಾಧಿಕಾರಿ ಪವನ್‌ಕುಮಾರ್ ಮಾಲಪಾಟಿ ಹೇಳಿದರು.

    ನಗರದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಆವರಣದಲ್ಲಿ ಶನಿವಾರ ಏರ್ಪಡಿಸಿದ್ದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯಲ್ಲಿ ಮಾತನಾಡಿದರು. ದೇಶದ ರಕ್ಷಣೆಗೆ ಹೋರಾಡುವ ಸೈನಿಕರಂತೆ ನಾಡಿನಲ್ಲಿ ಕಾಡು ರಕ್ಷಣೆಗಾಗಿ ಅರಣ್ಯ ಸಿಬ್ಬಂದಿ ಹೋರಾಡುತ್ತಿದ್ದಾರೆ. ಪರಿಸರ ಸಂರಕ್ಷಣೆಯಲ್ಲಿ ಅರಣ್ಯ ಸಿಬ್ಬಂದಿಯ ಪಾತ್ರ ಪ್ರಮುಖವಾಗಿದೆ. ಜಿಲ್ಲೆಯಲ್ಲಿ ಎರಡು ವರ್ಷಗಳಿಂದ ಹೆಚ್ಚಿನ ಮಳೆಯಾಗುತ್ತಿದ್ದು, ಅರಣ್ಯ ಪ್ರದೇಶವೂ ಹೆಚ್ಚುತ್ತಿದೆ. ಎಲ್ಲೆಡೆ ಸಸಿ ನೆಡುವ ಕೆಲಸವೂ ನಡೆದಿದೆ ಎಂದರು.

    ಬಳ್ಳಾರಿ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಎಸ್.ಲಿಂಗರಾಜು ಮಾತನಾಡಿ, ಅರಣ್ಯ ಸಂರಕ್ಷಣೆಗೆ ಪ್ರಾಣ ಕಳೆದುಕೊಂಡವರ ಬದುಕು ನಮಗೆ ದೃಢ ಸಂಕಲ್ಪದಿಂದ ಕರ್ತವ್ಯ ನಿರ್ವಹಿಸಲು ನೆರವಾಗುತ್ತದೆ. ರಾಜ್ಯದಲ್ಲಿ 38 ಲಕ್ಷ ಹೆಕ್ಟೇರ್ ಅರಣ್ಯ ಪ್ರದೇಶವಿದೆ. 8 ಸಾವಿರ ಜನ ಅರಣ್ಯ ಸಿಬ್ಬಂದಿ ಕಾಯಂ ಹಾಗೂ 8 ಸಾವಿರ ದಿನಗೂಲಿ ನೌಕರರಿದ್ದಾರೆ ಎಂದು ತಿಳಿಸಿದರು.

    ಅರಣ್ಯ ಉಳಿಸುವ ಕಾಯಕ ನಿರಂತರವಾಗಿ ಸಾಗಬೇಕು. ಕರ್ತವ್ಯದ ಸಮಯದಲ್ಲಿ ಪ್ರಾಣ ಕಳೆದುಕೊಂಡವರಿಗೆ 30 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ. ಈ ಪರಿಹಾರ ಅರಣ್ಯ ಇಲಾಖೆಯ ಎಲ್ಲ ಸಿಬ್ಬಂದಿ, ದಿನಗೂಲಿ ನೌಕರರಿಗೂ ದೊರೆಯುವಂತಾಗಬೇಕು. ಅರಣ್ಯ ಭೂಮಿ ನಾಶ ಮತ್ತು ಕಬಳಿಕೆಯಾಗದಂತೆ ನೋಡಿಕೊಳ್ಳುವ ಕಾರ್ಯ ಮಾಡಬೇಕು ಎಂದರು.

    ಬಳ್ಳಾರಿ ವಿಭಾಗದ ಉಪ ಸಂರಕ್ಷಣಾಧಿಕಾರಿ ಸಿದ್ರಾಮಪ್ಪ ಎಂ.ಚಳಕಾಪುರೆ, ಎಸ್ಪಿ ಸೈದುಲು ಅದಾವತ್ ಮಾತನಾಡಿದರು. ಅಟಲ್ ಬಿಹಾರಿ ವಾಜಪೇಯಿ ಜೂಲಾಜಿಕಲ್ ಪಾರ್ಕ್‌ನ ಕಾರ್ಯನಿರ್ವಾಹಕ ನಿರ್ದೇಶಕ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎನ್.ಕಿರಣ್‌ಕುಮಾರ್, ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಆರ್.ವಿಜಯ್ ಕುಮಾರ್, ಅರಣ್ಯ ಸಂಚಾರಿ ದಳದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ, ಬಳ್ಳಾರಿ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕಂಟೆಪ್ಪ, ಬಳ್ಳಾರಿ ವಲಯ ಅಧಿಕಾರಿ ಎಸ್.ವಿ.ಮಂಜುನಾಥ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts