ಹೆಣ್ಣುಮಕ್ಕಳು ಸುಶಿಕ್ಷಿತರಾಗಿ, ಸಂಘಟಿತರಾಗಿ

ಬಳ್ಳಾರಿ ; ಉತ್ತಮ ಶಿಕ್ಷಣ ಪಡೆಯುವ ಮೂಲಕ ಯಾವುದೇ ಸಮಸ್ಯೆಗಳನ್ನು ಧೈರ್ಯವಾಗಿ ಎದುರಿಸಲು ಹೆಣ್ಣುಮಕ್ಕಳು ಸುಶಿಕ್ಷಿತರಾಗಿ ಸಂಘಟಿತರಾಗಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ತಿಳಿಸಿದರು.
ಇಲ್ಲಿನ ಸಂತ ಜನರ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ವಿದ್ಯಾರ್ಥಿನಿಯರೊಂದಿಗೆ ಶುಕ್ರವಾರ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು. ಶಿಕ್ಷಣ ಮಹಿಳೆಯರ ಭವಿಷ್ಯವನ್ನು ನಿರ್ಧರಿಸುವ ಬಹುದೊಡ್ಡ ಅಸ್ತವಾಗಿದೆ. ಹಾಗಾಗಿ ಹೆಣ್ಣುಮಕ್ಕಳು ತಮ್ಮ ಓದಿನ ಕಡೆಗೆ ಗಮನಹರಿಸುವ ಮೂಲಕ ಸಾಧನೆಯ ಶಿಖರವೇರಬೇಕು ಎಂದರು. ಹೆಣ್ಣುಮಕ್ಕಳು ಹೊರಗಿನ ಪ್ರಪಂಚದ ಸಾಮಾನ್ಯ ಜ್ಞಾನ ಬೆಳಿಸಿಕೊಳ್ಳಬೇಕು. ಕಾಲೇಜು ಸಮಯದಲ್ಲಿ ಒಂದೇ ತೋಟದ ಮೊಗ್ಗುಗಳಿದ್ದಂತೆ. ಹೂವಾಗಿ ಅರಳಬೇಕು. ಅಹಂಕಾರ ತ್ಯಜಿಸಬೇಕು ಎಂದು ಕಿವಿಮಾತು ಹೇಳಿದರು.
ಹೆಣ್ಣುಮಕ್ಕಳಿಗೆ ಮೊಬೈಲ್ ಮಾರಕವಾಗಿ ಪರಿಣಮಿಸುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅತಿಹೆಚ್ಚು ಎಚ್ಚರ ವಹಿಸಬೇಕಿದೆ. ಗೊತ್ತಿಲ್ಲದವರ ಜೆತೆ ಸ್ನೇಹ ಹೊಂದಬಾರದು. ಫೇಕ್ ಅಂಕೌಅಟ್‌ಗಳಿಂದ ಮೋಸ ಹೋಗುತ್ತಿದ್ದಾರೆ. ಇದು ತಪ್ಪಬೇಕು. ಮಹಿಳೆಯರು ಮೊಬೈಲ್‌ಗಳಿಂದ ಪ್ರಭಾವಿತರಾಗದೇ ಸಕಾರಾತ್ಮಕ ಚಿಂತನೆಗಳಿಗೆ ಅದ್ಯತೆ ನೀಡಬೇಕು. ಸದೃಢ ಸಾಮಾಜಿಕ ಪ್ರಜ್ಞೆಯನ್ನು ಬೆಳೆಸಿಕೊಳ್ಳಬೇಕು. ಯುವಸಮೂಹವು ಪ್ರೀತಿ-ಪ್ರೇಮ ಗೀಳಿಗೆ ಒಳಗಾಗದೇ, ತಮ್ಮ ಗುರಿಯೆಡೆಗೆ ಗಮನ ಹರಿಸಿ ಯಶಸ್ಸಿನ ಹಾದಿ ಕಡೆಗೆ ಸಾಗಬೇಕು. ತಂದೆ-ತಾಯಿಗೆ ಗೌರವಿಸಿ ಸಮಾಜದ ಉನ್ನತ ಸ್ಥಾನಗಳಲ್ಲಿ ಗುರುತಿಸಿಕೊಳ್ಳಬೇಕು ಎಂದರು.
ಬಳಿಕ ಜಿಪಂ ಯಿಂದ ಆಯೋಜಿಸಿದ್ದ ಮತದಾನ ಮಿಂಚಿನ ನೋಂದಣಿ ಅಭಿಯಾನ ಜಾಥಾಕ್ಕೆ ಚಾಲನೆ ನೀಡಿದರು. ನಂತರ ಬೆಂಗಳೂರು ರಸ್ತೆಯ ಪೊಲಾಕ್ಸ್ ಜೀನ್ಸ್ ಘಟಕಕ್ಕೆ ಭೇಟಿ ನೀಡಿ ಮಹಿಳಾ ಕಾರ್ಮಿಕರ ಸಮಸ್ಯೆಗಳನ್ನು ಆಲಿಸಿ ಮಾಹಿತಿ ಪಡೆದುಕೊಂಡರು. ಮಹಿಳಾ ಕಾರ್ಮಿಕರಿಗೆ ಕೆಲಸದ ಸ್ಥಳದಲ್ಲಿ ಕನಿಷ್ಠ ಮೂಲಸೌಕರ್ಯ ಒದಗಿಸಬೇಕು. ಸಕಾಲದಲ್ಲಿ ಅವರಿಗೆ ವೇತನ ಮತ್ತು ಪಿಎಫ್ ಪಾವತಿಸಬೇಕು ಎಂದು ಕಾರ್ಖಾನೆಯ ಮಾಲೀಕರಿಗೆ ಸೂಚಿಸಿದರು.

Share This Article

ಕಡಿಮೆ ಸಮಯದಲ್ಲಿ ಮನೆಯಲ್ಲೇ ಮಾಡಿ ರುಚಿಕರ ಆಲೂಪೂರಿ; ಇಲ್ಲಿದೆ ಸುಲಭ ವಿಧಾನ | Recipe

ದಿನ ನಿತ್ಯ ಒಂದೇ ರೀತಿಯ ಬೆಳಗ್ಗಿನ ತಿಂಡಿ ತಿಂದು ಬೇಸರವಾಗಿರುತ್ತದೆ. ಆದರೆ ಏನಾದರೂ ವಿಶೇಷವಾದ ಬ್ರೇಕ್​ಫಾಸ್ಟ್​…

ಉಗುರಿನಲ್ಲಿ ಅಡಗಿದೆ ನಿಮ್ಮ ಆರೋಗ್ಯದ ರಹಸ್ಯ; ಹೇಗೆ ಅಂತೀರಾ.. ಈ ಮಾಹಿತಿ ನೋಡಿ | Health Tips

ಒಬ್ಬ ವ್ಯಕ್ತಿಯನ್ನು ನೋಡುವ ಮೂಲಕ ಅವನ ಬಗ್ಗೆ ಬಹಳಷ್ಟು ಹೇಳಬಹುದು. ಆದರೆ ಉಗುರುಗಳು ನಿಮ್ಮ ಆರೋಗ್ಯದ…

ಬೆಟ್ಟದ ನೆಲ್ಲಿಕಾಯಿ- ಅಲೋವೆರಾ ಕೂದಲಿನ ಆರೈಕೆಗೆ ಯಾವುದು ಬೆಸ್ಟ್​​; ಇಲ್ಲಿದೆ ಹೆಲ್ತಿ ಮಾಹಿತಿ | Health Tips

ಹುಡುಗನಾಗಲಿ ಅಥವಾ ಹುಡುಗಿಯಾಗಲಿ ಇಬ್ಬರಿಗೂ ತಮ್ಮ ಕೂದಲಿನ ಬಗ್ಗೆ ಹೆಚ್ಚು ಕಾಳಜಿ ಇರುತ್ತದೆ. ಪ್ರಸಕ್ತ ಜೀವನಶೈಲಿ,…