More

    ಪಕ್ಷ, ಅಭಿವೃದ್ಧಿ ಕಾರ್ಯಗಳಿಗೆ ಗೆಲುವಿನ ಶ್ರೇಯಸ್ಸು: ಹಂಪಿಯಲ್ಲಿ ಡಿಸಿಎಂ ಅಶ್ವತ್ಥ್ ನಾರಾಯಣ ಹೇಳಿಕೆ

    ಪಕ್ಷ, ಅಭಿವೃದ್ಧಿ ಕಾರ್ಯಗಳಿಗೆ ಗೆಲುವಿನ ಶ್ರೇಯಸ್ಸು: ಹಂಪಿಯಲ್ಲಿ ಡಿಸಿಎಂ ಅಶ್ವತ್ಥ್ ನಾರಾಯಣ ಹೇಳಿಕೆ

    ಬಳ್ಳಾರಿ: ಶಿರಾ ಹಾಗೂ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿರೀಕ್ಷಿತವಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಸಿ.ಎನ್.ಅಶ್ವತ್ಥ್ ನಾರಾಯಣ ಹೇಳಿದರು.

    ಎಲ್ಲ ಚುನಾವಣೆಗಳಲ್ಲಿ ಜನರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ. ಶಿರಾ ಹಾಗೂ ರಾಜ ರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಲಿತಾಂಶ ಅದರ ಮುಂದುವರಿದ ಭಾಗವಾಗಿದೆ. ಬಿಜೆಪಿ ಯಾವುದೇ ವ್ಯಕ್ತಿಗೆ ಸೀಮಿತವಾಗಿಲ್ಲ. ಇದರಿಂದಾಗಿ ಉಪ ಚುನಾವಣೆ ಗೆಲುವು ಯಾವುದೇ ವ್ಯಕ್ತಿಗೆ ಸೀಮಿತವಾಗಿಲ್ಲ. ಪಕ್ಷ ಹಾಗೂ ಸರ್ಕಾರದ ಅಭಿವೃದ್ಧಿ ಕಾರ್ಯಗಳು ಗೆಲುವಿಗೆ ಕಾರಣವಾಗಿವೆ. ಗೆಲುವಿನ ಶ್ರೇಯಸ್ಸು ಎಲ್ಲ ನಾಯಕರಿಗೆ ಸಲ್ಲುತ್ತದೆ ಎಂದು ಮಂಗಳವಾರ ಕನ್ನಡ ವಿವಿ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ತಿಳಿಸಿದರು.

    ಬಿಜೆಪಿಯಲ್ಲಿ ಜಾತಿ ಆಧಾರಿತ ರಾಜಕೀಯ ಮಾಡುವ ಪ್ರಶ್ನೆಯೇ ಇಲ್ಲ. ನಮ್ಮ ಕೆಲಸ, ನಿಸ್ವಾರ್ಥತೆ, ಭ್ರಷ್ಟಾಚಾರ ರಹಿತ ಆಡಳಿತ ಮತ್ತು ಉತ್ತಮ ವ್ಯಕ್ತಿತ್ವದ ಮೂಲಕ ಸಮುದಾಯದ ನಾಯಕರಾಗಬೇಕು. ಬೂಟಾಟಿಕೆ, ಸ್ವಾರ್ಥತೆ ಹಾಗೂ ಕುಟುಂಬ ರಾಜಕೀಯದ ಮೂಲಕ ಸಮುದಾಯದ ನಾಯಕರಾಗಲು ಸಾಧ್ಯವಿಲ್ಲ ಎಂದು ಪರೋಕ್ಷವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರನ್ನು ಟೀಕಿಸಿದರು.

    ಶಾಸಕ ಬಸವನಗೌಡ ಪಾಟೀಲ್ ಯತ್ನಾಳ ಅವರು ಏನು ಹೇಳಿದ್ದಾರೆ ಎಂಬುದು ನನಗೆ ತಿಳಿದಿಲ್ಲ. ಆದರೆ, ಪಕ್ಷ ಹಾಗೂ ಸರ್ಕಾರದ ಬಗ್ಗೆ ಬಹಿರಂಗವಾಗಿ ಮಾತನಾಡುವುದು ಸರಿಯಲ್ಲ. ಈ ವಿಚಾರದ ಬಗ್ಗೆ ಪಕ್ಷದ ರಾಜ್ಯ ಅಧ್ಯಕ್ಷರು ಗಮನಹರಿಸಿದ್ದು, ಯಾವ ಕ್ರಮಕಗೊಳ್ಳಲಿದ್ದಾರೆ ಎಂಬುದನ್ನು ಕಾದು ನೋಡಬೇಕು.

    ಉನ್ನತ ಶಿಕ್ಷಣ ಇಲಾಖೆ ಪಾರದರ್ಶಕತೆ ಹಾಗೂ ಭ್ರಷ್ಟಾಚಾರ ರಹಿತವಾಗಿದೆ. ವಿಪಕ್ಷಗಳಿಂದ ಈ ರೀತಿಯ ಆಡಳಿತ ಸಾಧ್ಯವಿಲ್ಲ. ಸಮಿತಿ ರಚನೆ ಮೂಲಕ ಕುಲಪತಿಗಳ ನೇಮಕ ಪ್ರಕ್ರಿಯೆ ನಡೆಯುತ್ತದೆ. ಆದರೆ, ಪ್ರೊ.ಅಶೋಕ ಕುಮಾರ್ ಸಾವಿನ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ರಾಜಕಾರಣ ಮಾಡಲು ಹೊರಟಿರುವುದು ಸರಿಯಲ್ಲ. ಪ್ರೊ.ಅಶೋಕ ಕುಮಾರ್ ಡೆತ್‌ನೋಟ್‌ನಲ್ಲಿ ಯಾರ ಹೆಸರನ್ನು ಉಲ್ಲೇಖಿಸಿಲ್ಲ.

    ಕಾಲೇಜುಗಳನ್ನು ಮರು ಆರಂಭಿಸಬೇಕೆಂಬುದು ವಿದ್ಯಾರ್ಥಿಗಳ ಒತ್ತಾಯವಾಗಿದೆ. ಯುಜಿಸಿ ಮಾರ್ಗಸೂಚಿಯಂತೆ ಕಾಲೇಜುಗಳನ್ನು ಆರಂಭಿಸಲಾಗುತ್ತಿದೆ. ಕನ್ನಡ ವಿವಿಯ ಬೋಧಕ, ಬೋಧಕೇತರ ಸಿಬ್ಬಂದಿಯ ಬಾಕಿ ವೇತನ ಸಮಸ್ಯೆ ಶೀಘ್ರ ಇತ್ಯರ್ಥವಾಗಲಿದೆ ಎಂದು ಉಪ ಮುಖ್ಯಮಂತ್ರಿ ಅಶ್ವತ್ಥ್ು ನಾರಾಯಣ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts