More

    ಸ್ತ್ರೀಯರಿಗೆ ಮಾಡಿರುವ ಅವಮಾನ

    ಹೊಸಪೇಟೆ: ಸರ್ಕಾರಿ ಕೆಲಸ ಪಡೆಯಬೇಕಾದರೆ ಮಹಿಳೆಯರು ಮಂಚ ಹತ್ತಬೇಕು ಎಂದು ಮಹಿಳಾ ಸಮುದಾಯವನ್ನು ಅವಮಾನಿಸಿರುವ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧಕ್ರಮಕ್ಕೆ ಆಗ್ರಹಿಸಿ ನಗರದಲ್ಲಿ ಬಿಜೆಪಿ ಮಹಿಳಾ ಮೋರ್ಚಾದಿಂದ ಗುರುವಾರ ಪ್ರತಿಭಟನೆ ನಡೆಯಿತು.
    ಮಾಜಿ ಸಚಿವ ಪ್ರಿಯಾಂಕ ಖರ್ಗೆ ಇತ್ತೀಚೆಗೆ ಕಲಬುರಗಿಯಲ್ಲಿ ಪತ್ರಿಕಾಗೊಷ್ಠಿ ನಡೆಸಿ, ಸರ್ಕಾರದ ವಿರುದ್ಧ ಮಾತನಾಡುವ ವೇಳೆ ವಿನಾಕಾರಣ ಮಹಿಳೆಯರ ವಿರುದ್ಧ ನಾಲಿಗೆ ಹರಿಬಿಟ್ಟಿದ್ದಾರೆ. ಇದು ಲಂಚ-ಮಂಚದ ಸರಕಾರ, ಯುವಕರಿಗೆ ನೌಕರಿ ಬೇಕೆಂದರೆ ಲಂಚ ಕೊಡಬೇಕು. ಯುವತಿಯರಿಗೆ ನೌಕರಿ ಬೇಕೆಂದರೆ ಮಂಚ ಹತ್ತಬೇಕು ಎಂಬ ಕೀಳು ಮಟ್ಟದಲ್ಲಿ ಹೇಳಿಕೆ ನೀಡಿದ್ದಾರೆ. ಇದು ಉದ್ಯೋಗಸ್ಥ, ಉದ್ಯೋಗಾಕಾಂಕ್ಷಿ ಮಹಿಳೆಯರಿಗೆ ಮಾಡಿರುವ ಅವಮಾನ ಎಂದು ಆರೋಪಿಸಿದರು. ಈ ಹಿನ್ನೆಲೆಯಲ್ಲಿ ಕೂಡಲೇ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಮಹಿಳಾ ಮೋರ್ಚ ಪ್ರಮುಖರು ಒತ್ತಾಯಿಸಿದರು.
    ರಾಜಸ್ತಾನದ ಸುರಾನಾ ಎಂಬ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಇಂದ್ರಕುಮಾರ್ ಎಂಬ ದಲಿತ ಹುಡುಗನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆಗೆ ನೈತಿಕ ಹೊಣೆಹೊತ್ತು ರಾಜಸ್ತಾನ ಮುಖ್ಯಮಂತ್ರಿ ಸ್ಥಾನಕ್ಕೆ ಅಶೋಕ ಗೆಹ್ಲೋಟ್ ರಾಜೀನಾಮೆ ನೀಡಬೇಕು ಎಂದರು.
    ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಡಾ.ಅರುಂಡಿ ಸುವರ್ಣಾ ನಾಗರಾಜ್, ಉಪಾಧ್ಯಕ್ಷೆ ಕವಿತಾ ಈಶ್ವರ ಸಿಂಗ್, ಪ್ರಧಾನ ಕಾರ್ಯದರ್ಶಿ ಭಾರತಿ ಬಸವನಗೌಡ ಪಾಟೀಲ, ಬಿ.ಪೂರ್ಣಿಮಾ, ಎ.ನಾಗರತ್ನಾ, ಶೋಭಾ ಗಾಯಕವಾಡ, ರೇಣುಕಮ್ಮ, ಎಸ್‌ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಕೆ.ಎಚ್.ಮಲ್ಲಿಕಾರ್ಜುನ ನಾಯ್ಕ, ಎಸ್.ಪಿ.ಲಿಂಬನಾಯ್ಕ, ರಾಘವೇಂದ್ರ ಜಿ.ಬಿ. ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts