More

    ಹಾಸ್ಟೆಲ್ ವಿದ್ಯಾರ್ಥಿಗಳ ಪ್ರತಿಭಟನೆ

    ಬಳ್ಳಾರಿ: ರಸ್ತೆ ಅಪಘಾತದಲ್ಲಿ ಮೃತಪಟ್ಟ ಮೂವರು ವಿದ್ಯಾರ್ಥಿಗಳ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿ ನಗರದ ಕೌಲ್ ಬಜಾರ್‌ನಲ್ಲಿರುವ ಪರಿಶಿಷ್ಟ ಪಂಗಡದ (ಎಸ್‌ಟಿ) ನಂ.1 ವಸತಿ ನಿಲಯದ ವಿದ್ಯಾರ್ಥಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು.

    ಹಲಕುಂದಿ ಸಮೀಪ ಸೋಮವಾರ ರಸ್ತೆ ಅಫಘಾತದಲ್ಲಿ ಮೂವರು ಹಾಸ್ಟೆಲ್ ವಿದ್ಯಾರ್ಥಿಗಳು ಮೃತಪಟ್ಟಿದ್ದರು. ಅವರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಬೆಳಗ್ಗೆಯೇ ಹಾಸ್ಟೆಲ್ ಮುಂದೆ ವಿದ್ಯಾರ್ಥಿಗಳು ಧರಣಿ ನಡೆಸಿದರು. ಸ್ಥಳಕ್ಕೆ ಮೇಲಧಿಕಾರಿಗಳು ಬರುವಂತೆ ಒತ್ತಾಯಿಸಿದರು. ವಿದ್ಯಾರ್ಥಿಗಳು ಬಡಕುಟುಂಬದವರು. ಅವರನ್ನು ಕಳೆದುಕೊಂಡ ಕುಟುಂಬಗಳು ದುಃಖದಲ್ಲಿವೆ. ಸರ್ಕಾರದಿಂದ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

    ವಸತಿ ನಿಲಯದಲ್ಲಿ ಕಾಯಂ ವಾರ್ಡನ್ ಇಲ್ಲ. ಅತಿಥಿ ಮೇಲ್ವಿಚಾರಕರಾಗಿ ಒಂದು ವರ್ಷದಿಂದ ಶಿವಪ್ಪ ಕೆಲಸ ಮಾಡುತ್ತಿದ್ದಾರೆ. ಕಾಯಂ ನಿಲಯಪಾಲಕರನ್ನು ನಿಯೋಜನೆ ಮಾಡಿಲ್ಲ. ಅನೇಕ ಬಾರಿ ಮೇಲಧಿಕಾರಿಗಳಿಗೆ ಮನವಿ ಮಾಡಿಕೊಂಡರು ಕ್ರಮ ಕೈಗೊಂಡಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದರು.

    ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಸಕೀನಾ ಅವರು, ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ಶೀಘ್ರವೇ ಪರಿಹಾರ ಒದಗಿಸಲಾಗುವುದು. ಸಾರಿಗೆ ಸಂಸ್ಥೆ, ಸಮಾಜ ಕಲ್ಯಾಣ ಇಲಾಖೆ ಮತ್ತು ವೈಯಕ್ತಿಕವಾಗಿ ಇಲಾಖೆ ಸಿಬ್ಬಂದಿ ಸಹಾಯ ಮಾಡಲಿದ್ದಾರೆ. ಮೃತರ ಕುಟುಂಬಕ್ಕೆ ಅನ್ಯಾಯವಾಗದಂತೆ ಪರಿಹಾರವನ್ನು ತಲುಪಿಸುವ ಕೆಲಸ ಮಾಡಲಾಗುವುದು ಎಂದರು. ವಿದ್ಯಾರ್ಥಿಗಳಾದ ವಿಜಯ್, ಗಾದಿಲಿಂಗಪ್ಪ, ಗಣೇಶ, ಮಹಾಂತೇಶ, ದೇವರಾಜ್ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts