More

    ಮಿರ್ಜಾ ಇಸ್ಮಾಯಿಲ್ ಕೊಡುಗೆ ಅಪಾರ; ಶಿಕ್ಷಕ ಶೇಕ್ ರೆಹ್ಮತ್ ಉಲ್ಲಾ ಅಭಿಪ್ರಾಯ

    ಬಳ್ಳಾರಿ: ಕನ್ನಡ ಸಾಹಿತ್ಯ ಪರಿಷತ್ತಿನ ಬೆಳವಣಿಗೆಯಲ್ಲಿ ದಿವಾನ ಸರ್ ಮಿರ್ಜಾ ಇಸ್ಮಾಯಿಲ್ ಕೊಡುಗೆ ಅಪಾರವಾಗಿದೆ ಎಂದು ಶಿಕ್ಷಕ ಶೇಕ್ ರೆಹ್ಮತ್ ಉಲ್ಲಾ ಅಭಿಪ್ರಾಯಪಟ್ಟರು.

    ನಗರದ ಕನ್ನಡ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ ಮಂಗಳವಾರ ಹಮ್ಮಿಕೊಂಡಿದ್ದ ದಿವಾನ ಸರ್ ಮಿರ್ಜಾ ಇಸ್ಮಾಯಿಲ್ ಅವರ 137ನೇ ಜನ್ಮದಿನಾಚರಣೆಯ ಅಂಗವಾಗಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು. ಮೈಸೂರು ಸಂಸ್ಥಾನದಲ್ಲಿ ದಿವಾನರಾಗಿದ್ದ ಮಿರ್ಜಾ ಇಸ್ಮಾಯಿಲ್ ಕನ್ನಡ ನಾಡಿಗೆ ಅವಿಸ್ಮರಣೀಯ ಸೇವೆ ಸಲ್ಲಿಸಿದ್ದಾರೆ ಎಂದರು.

    ಟಿಪ್ಪು ಸುಲ್ತಾನ್ ಫೆಡರೇಷನ್ ಜಿಲ್ಲಾಧ್ಯಕ್ಷ ಕಪ್ಪಗಲ್ಲು ರಸೂಲ್ ಸಾಬ್ ಮಾತನಾಡಿ, ಕನ್ನಡ ನಾಡು ನುಡಿಗೆ ಸೇವೆ ಸಲ್ಲಿಸಿದ ಮಹನೀಯರನ್ನು ಸ್ಮರಿಸುವುದು ಅವರ ಆದರ್ಶಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಜವಾಬ್ದಾರಿಯನ್ನು ಪರಿಷತ್ತು ಪ್ರಾಮಾಣಿಕವಾಗಿ ಮಾಡುತ್ತಿದೆ. ಸರ್ ಮಿರ್ಜಾ ಇಸ್ಮಾಯಿಲ್ ನಾಡಿಗೆ ನೀಡಿದ ಕೊಡುಗೆ ಕುರಿತು ತಿಳಿಸಿದರು.

    ಕಸಾಪ ಜಿಲ್ಲಾಧ್ಯಕ್ಷ ಡಾ.ನಿಷ್ಠಿ ರುದ್ರಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು ನ್ಯಾ.ಹುಸೇನ್ ಭಾಷಾ, ಪ್ರಮುಖರಾದ ಶಬ್ಬೀರ್ ಬಾಷಾ, ಬಸವರಾಜ ಗದಗಿನ, ಬಸವರಾಜ ಬಿಸಲಹಳ್ಳಿ, ಕೆ.ವಿ.ನಾಗರೆಡ್ಡಿ, ಎ.ಎರ‌್ರಿಸ್ವಾಮಿ, ನಜೀರ್ ಪಾಷಾ, ನಾಗರಾಜ, ಸತ್ಯನಾರಾಯಣ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts