More

    ಲಾಕ್‌ಡೌನ್ ಪರಿಹಾರ ವಿಳಂಬಕ್ಕೆ ಖಂಡಿಸಿ ಕಾರ್ಮಿಕರ ಫೆಡರೇಷನ್‌ಪ್ರತಿಭಟನೆ

    ಬಳ್ಳಾರಿ: ಕರೊನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಘೋಷಿಸಿದ್ದ ಐದು ಸಾವಿರ ರೂ. ಪರಿಹಾರ ತ್ವರಿತವಾಗಿ ನೀಡಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಫೆಡರೇಷನ್ ಹೊಸಪೇಟೆ ತಾಲೂಕು ಸಮಿತಿಯಿಂದ ಬುಧವಾರ ನಗರದ ಕಾರ್ಮಿಕ ಇಲಾಖೆ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

    ಹಲವಾರು ಬಾರಿ ದಾಖಲೆ ಸಲ್ಲಿಸಲಾಗಿದ್ದರೂ ಪರಿಹಾರ ಮರೀಚಿಕೆಯಾಗಿದೆ. ಇಲಾಖೆಯಿಂದ ಬೇರೆ ಸೌಲಭ್ಯಗಳನ್ನು ಕಾರ್ಮಿಕರಿಗೆ ತಲುಪಿಸುವಲ್ಲಿ ಕೂಡ ಲೋಪದೋಷಗಳಾಗುತ್ತಿವೆ. ಇದರಿಂದಾಗಿ ಕಾರ್ಮಿಕರು ಬ್ಯಾಂಕ್‌ಗಳಿಗೆ ಅಲೆಯುವಂತಾಗಿದೆ. ಕಾರ್ಮಿಕ ಕಚೇರಿಯಲ್ಲಿ ಈ ಬಗ್ಗೆ ಹಾರಿಕೆಯ ಉತ್ತರ ನೀಡಲಾಗುತ್ತಿದೆ. ಇದರಿಂದಾಗಿ ಕಾರ್ಮಿಕರು ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ ಎಂದು ಆರೋಪಿಸಲಾಯಿತು.

    ಅರ್ಹ ಕಾರ್ಮಿಕರಿಗೆ ಮೂರು ಸಾವಿರ ರೂ. ಪಿಂಚಣಿ ನೀಡಬೇಕು. ಮೂರು ತಿಂಗಳಿಗೊಮ್ಮೆ ಕಾರ್ಮಿಕ ಸಂಘಗಳು, ಗುತ್ತಿಗೆ ಕಾರ್ಮಿಕರ ಸಭೆ ಆಯೋಜಿಸಬೇಕು. ಪರಿಹಾರ ಪಡೆಯಲು ಆನ್‌ಲೈನ್ ಪದ್ಧತಿ ರದ್ದುಪಡಿಸಬೇಕೆಂದು ಒತ್ತಾಯಿಸಲಾಯಿತು. ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಫೆಡರೇಷನ್ ಜಿಲ್ಲಾ ಅಧ್ಯಕ್ಷ ಎನ್.ಯಲ್ಲಾಲಿಂಗ, ಹೊಸಪೇಟೆ ತಾಲೂಕು ಅಧ್ಯಕ್ಷ ಎಂ.ಗೋಪಾಲ, ಕಾರ್ಯದರ್ಶಿ ರಾಮಾಂಜಿನಿ, ಸಿಐಟಿಯು ರಾಜ್ಯ ಉಪಾಧ್ಯಕ್ಷ ಆರ್.ಎಸ್.ಬಸವರಾಜ, ಜಿಲ್ಲಾ ಉಪಾಧ್ಯಕ್ಷ ಎಚ್.ತಿಪ್ಪಯ್ಯ ಹಾಗೂ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts