ಬಿಎಸ್ಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ

ಬಳ್ಳಾರಿ: ಬಿಎಸ್‌ಪಿ ಅಭ್ಯರ್ಥಿ ಕೆ.ಗೂಳಪ್ಪ ಚುನಾವಣಾಧಿಕಾರಿ ರಾಮ್‌ಪ್ರಸಾತ್ ಮನೋಹರ್‌ಗೆ ನಾಮಪತ್ರ ಬುಧವಾರ ಸಲ್ಲಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದ 28ಕ್ಷೇತ್ರಗಳಲ್ಲಿ ಮಾಯಾವತಿ ಅವರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದಾರೆ. ಜಿಲ್ಲೆಯಲ್ಲಿ ಎಲ್ಲ ವರ್ಗದವರನ್ನು ವಿಶ್ವಾಸಕ್ಕೆ ತೆಗೆದುಕೊಂದು ನನ್ನನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದಾರೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಮತದಾರರು ಬಿಎಸ್ಪಿಗೆ ಬೆಂಬಲ ನೀಡಬೇಕು ಎಂದು ಕೋರಿದರು.