ಲೋಕಸಭೆ ಉಪಚುನಾವಣೆಯಲ್ಲಿ ಭಾರಿ ಅಂತರದಿಂದ ಗೆದ್ದಿದ್ದ ವಿ ಎಸ್‌ ಉಗ್ರಪ್ಪ ಸೋಲಿನ ಸುಳಿಯಲ್ಲಿ

ಬಳ್ಳಾರಿ: ಜಿದ್ದಾಜಿದ್ದಿಗೆ ಕಾರಣವಾಗಿದ್ದ ಬಳ್ಳಾರಿ ಲೋಕಸಭಾ ಕ್ಷೇತ್ರದ ಫಲಿತಾಂಶ ಬಹುತೇಕ ಸ್ಪಷ್ಟವಾಗಿದ್ದು, ಲೋಕಸಭೆ ಉಪ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಭಾರಿ ಅಂತರದ ಮತಗಳಿಂದ ವಿಜಯ ಸಾಧಿಸಿದ್ದ ಸಂಸದ ವಿ.ಎಸ್.ಉಗ್ರಪ್ಪ ಅವರಿಗೆ ಮುಖಭಂಗವಾದಂತಾಗಿದೆ.

ಬಿಜೆಪಿ ಅಭ್ಯರ್ಥಿ ವೈ.ದೇವೇಂದ್ರಪ್ಪ ಅವರ ಎದುರಾಗಿ ಸ್ಪರ್ಧಿಸಿದ್ದ ಉಗ್ರಪ್ಪ ಅವರು ಉಪ ಚುನಾವಣೆಯಲ್ಲಿ ಸುಮಾರು 2.43 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದರು. ಆದರೆ, ಇದೀಗ ಸೋಲಿನ ಸುಳಿಯಲ್ಲಿ ಸಿಲುಕಿದ್ದಾರೆ.

ಬಿಜೆಪಿಯ ದೇವೇಂದ್ರಪ್ಪ ಅವರು ಸುಮಾರು 34,111 ಮತಗಳ ಅಂತರವನ್ನು ಕಾಯ್ದುಕೊಂಡಿದ್ದು, ಉಗ್ರಪ್ಪ ಅವರ ಸೋಲು ಬಹುತೇಕ ಖಚಿತವಾಗಿದೆ. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *