More

    ಮರಾಠ ಅಭಿವೃದ್ಧಿ ನಿಗಮಕ್ಕೆ ವಿರೋಧ: ಬಳ್ಳಾರಿಯಲ್ಲಿ ಬಂದ್‌ಗೆ ಸಿಗದ ಬೆಂಬಲ, ಪ್ರತಿಭಟನೆಗೆ ಸೀಮಿತ

    ಬಳ್ಳಾರಿ: ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ಹಾಗೂ ಜಿಲ್ಲೆ ವಿಭಜನೆ ವಿರೋಧಿಸಿ ಕರೆ ನೀಡಲಾಗಿದ್ದ ಬಂದ್‌ಗೆ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಕರವೇ ಸೇರಿದಂತೆ ಇತರ ಕೆಲ ಸಂಘಟನೆಗಳು ಶನಿವಾರ ಪ್ರತಿಭಟನೆ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದವು.

    ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ ಮೂಲಕ ರಾಜ್ಯ ಸರ್ಕಾರ ಮತ ಬ್ಯಾಂಕ್ ರಾಜಕೀಯ ಮಾಡುತ್ತಿದೆ. ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವೇಳೆ ಸರ್ಕಾರ ಕನ್ನಡಪರ ಸಂಘಟನೆಗಳ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚರ್ಚಿಸಬೇಕಿತ್ತು. ಆದರೆ, ಮುಖ್ಯಮಂತ್ರಿ ಆಕ್ರಮಣಕಾರಿ ನಿಲುವು ಪ್ರದರ್ಶಿಸುತ್ತಿದ್ದಾರೆ. ಹೋರಾಟಗಳ ಮೂಲಕವೇ ಮುಖ್ಯಮಂತ್ರಿ ಆಗಿರುವ ಯಡಿಯೂರಪ್ಪ ಹೋರಾಟ ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದಾರೆ. ಬಿಜೆಪಿ ಶಾಸಕರು ಕನ್ನಡ ಪರ ಸಂಘಟನೆಗಳನ್ನು ದೂಷಿಸುತ್ತಿವೆ. ಸಂಘಟನೆಗಳನ್ನು ನಿಂದನೆ ಮಾಡುತ್ತಿರುವ ಶಾಸಕರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದರು.

    ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿ ಬಳಿಕ ಬಿಡುಗಡೆ ಮಾಡಿದರು. ಕರವೇ ಜಿಲ್ಲಾ ಅಧ್ಯಕ್ಷ ಚಾನಾಳ್ ಶೇಖರ್, ಮುಖಂಡರಾದ ಶಂಕರ್, ಹನುಮಂತ ರೆಡ್ಡಿ, ಜನಸೈನ್ಯ ಸಂಘಟನೆ ಅಧ್ಯಕ್ಷ ಕೆ.ಎರ‌್ರಿಸ್ವಾಮಿ ಹಾಗೂ ಇತರರು ಇದ್ದರು.

    ಮರಾಠ ಅಭಿವೃದ್ಧಿ ನಿಗಮಕ್ಕೆ ವಿರೋಧ: ಬಳ್ಳಾರಿಯಲ್ಲಿ ಬಂದ್‌ಗೆ ಸಿಗದ ಬೆಂಬಲ, ಪ್ರತಿಭಟನೆಗೆ ಸೀಮಿತ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts