More

    ನಾಳೆಯೊಳಗೆ ಅಭ್ಯರ್ಥಿಗಳ ಪಟ್ಟಿ ಅಂತಿಮ: ಸಂಡೂರಿನಲ್ಲಿ ಸಿಎಂ ಯಡಿಯೂರಪ್ಪ ಹೇಳಿಕೆ

    ಬಳ್ಳಾರಿ: ಮಸ್ಕಿ, ಬಸವ ಕಲ್ಯಾಣ ಮತ್ತು ಬೆಳಗಾವಿಯ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಸಂಡೂರಿನ ಜಿಂದಾಲ್ ಏರ್‌ರ್ಪೋರ್ಟ್‌ನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದರು.

    ಮೂರು ಕಡೆ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದೆ. ಹೀಗಾಗಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಹೈಕಮಾಂಡ್‌ಗೆ ಕಳಿಸಲಾಗಿದೆ. ನಾಳೆಯೊಳಗೆ ಅಭ್ಯರ್ಥಿಗಳು ಪಟ್ಟಿ ಅಂತಿಮವಾಗಲಿದೆ. ರಾಜ್ಯಕ್ಕೆ ಉತ್ತಮ ಬಜೆಟ್ ನೀಡಿದ್ದೇವೆ. ಜನಪರ ಬಜೆಟ್ ಮುಂದಿಟ್ಟುಕೊಂಡು ಚುನಾವಣೆಗೆ ಹೋಗುತ್ತಿದ್ದೇವೆ. ರಾಜ್ಯದಲ್ಲಿ ಆಗುತ್ತಿರುವ ಅಭಿವೃದ್ಧಿ ನೋಡಿ ಜನರು ಬಿಜೆಪಿಗೆ ಮತ ಹಾಕುವ ವಿಶ್ವಾಸವಿದೆ ಎಂದರು. ರಾಜ್ಯದಲ್ಲಿ ಕರೊನಾ ತಡೆಗೆ ಸರ್ಕಾರ ಸೂಕ್ತ ಕ್ರಮ ಕೈಗೊಂಡಿದೆ. ಅಲ್ಲದೆ, ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಗಡಿ ಭಾಗದಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಬಿಎಸ್‌ವೈ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts