More

    ಮೆಗಾ ಟೆಕ್ಸ್ಟ್‌ಟೈಲ್ ಪಾರ್ಕ್ ಆರಂಭಕ್ಕೆ ಚಿಂತನೆ: ಸಚಿವ ಶಂಕರ ಬಿ.ಪಾಟೀಲ ಮುನೇನಕೊಪ್ಪ ಹೇಳಿಕೆ

    ಬಳ್ಳಾರಿ: ರಾಜ್ಯದಲ್ಲಿ ಮೆಗಾ ಟೆಕ್ಸ್ಟ್‌ಟೈಲ್ ಪಾರ್ಕ್ ಆರಂಭಕ್ಕೆ ಚಿಂತನೆ ನಡೆಸಲಾಗಿದೆ. ಇದರಿಂದ ಕೈಮಗ್ಗ ಮತ್ತು ಜವಳಿ ಪುನಶ್ಚೇತನ ಸಾಧ್ಯವಾಗುತ್ತದೆ ಎಂದು ಸಚಿವ ಶಂಕರ ಬಿ.ಪಾಟೀಲ ಮುನೇನಕೊಪ್ಪ ಹೇಳಿದರು.

    ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಇಲಾಖೆಯಿಂದ 12 ಲಕ್ಷ ಜನರಿಗೆ ಉದ್ಯೋಗ ನೀಡಲಾಗಿದೆ. ರಾಜ್ಯದಲ್ಲಿ 321 ಕೋಟಿ ರೂ. ಸಬ್ಸಿಡಿ ಹಣ ನೀಡಿದ್ದು, 2020-21ನೇ ಸಾಲಿನಲ್ಲಿ 121 ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ ಜವಳಿ ಇಲಾಖೆ ಶೇ.90 ಸಬ್ಸಿಡಿ ನೀಡುವ ಕೆಲಸ ಮಾಡುತ್ತಿದೆ. ಯಾವುದೇ ಇಲಾಖೆ ಮಾಡದ ಕೆಲಸ ನಮ್ಮ ಇಲಾಖೆ ಮಾಡಿದೆ. ಸಮುದಾಯದ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸಲಾಗುತ್ತದೆ ಎಂದರು.

    ಕೇಂದ್ರದ ಮಹತ್ವಾಕಾಂಕ್ಷೆಯ ಎನ್‌ಬಿಎಚ್‌ಪಿ ಜಾರಿಗೆ ತರಲಾಗಿದೆ. ಇದರಿಂದ ಜವಳಿ ಉದ್ಯಮಕ್ಕೆ ಅನುಕೂಲವಾಗಲಿದೆ. ಯೋಜನೆಯ ಮೂಲಕ ರಾಜ್ಯದಲ್ಲಿ 950 ಕೋಟಿ ರೂ. ಅನುದಾನ ಮೀಸಲಿರಿಸಲಾಗುತ್ತದೆ. 20-30 ಯೋಜನೆಗಳ ಮೂಲಕ ಸಮುದಾಯದ ಕಟ್ಟ ಕಡೆಯ ವ್ಯಕ್ತಿಗೂ ನೆರವು ಸಿಗುವಂತೆ ಕ್ರಮಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಎಲ್ಲ ಕಬ್ಬುಬೆಳೆಗಾರರಿಗೆ ಹಣ ಬಿಡುಗಡೆ ಮಾಡಲಾಗಿದೆ. ಹಣ ಬಾಕಿ ಉಳಿಸಿಕೊಂಡಿಲ್ಲ ಎಂದು ಸ್ಪಷ್ಟ ಪಡಿಸಿದ ಸಚಿವ, ಈ ಹಿಂದೆ ಬಾಕಿ ಇರುವ ಹಣದ ಬಗ್ಗೆ ಮಾಹಿತಿ ಪಡೆಯಲಾಗುವುದು ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts