More

    ಮುಂಡರಗಿ ಬಡಾವಣೆಯಲ್ಲಿ ಉದ್ಯೋಗಕ್ಕಾಗಿ ಜೀವನೋಪಾಯ ಕೇಂದ್ರ: ಡಿಸಿ ಪವನ್‌ಕುಮಾರ್ ಮಾಲಪಾಟಿ ಹೇಳಿಕೆ

    ಬಳ್ಳಾರಿ: ಮುಂಡರಗಿ ಆಶ್ರಯ ಬಡಾವಣೆಯಲ್ಲಿರುವ ಕುಟುಂಬಗಳಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಅಲ್ಲೇ 39.27 ಎಕರೆ ವಿಸ್ತೀರ್ಣದಲ್ಲಿ ಜೀವನೋಪಾಯ ಕೇಂದ್ರ ಸ್ಥಾಪಿಸಲು ನಿರ್ಧರಿಸಲಾಗಿದೆ. ಜಿಲ್ಲಾ ಕೈಗಾರಿಕಾ ಕೇಂದ್ರದ ಅಧಿಕಾರಿಗಳು ತಕ್ಷಣ ಕಾರ್ಯಪ್ರವೃತ್ತರಾಗಬೇಕು ಎಂದು ಜಿಲ್ಲಾಧಿಕಾರಿ ಪವನ್‌ಕುಮಾರ್ ಮಾಲಪಾಟಿ ಸೂಚಿಸಿದರು.

    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಮುಂಡರಗಿ ಆಶ್ರಯ ಬಡಾವಣೆ(ಮಹಾತ್ಮಗಾಂಧಿ ಟೌನ್‌ಶಿಫ್) ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಂಡರಗಿ ಬಡಾವಣೆಯಲ್ಲಿ 5,616 ಮನೆಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಮೊದಲ ಹಂತದಲ್ಲಿ ಸಾಧ್ಯವಾದರೆ 3500 ಮನೆಗಳನ್ನು ನಿರ್ಮಿಸಲು ಅಗತ್ಯ ಕ್ರಮಕೈಗೊಳ್ಳಬೇಕು. ಈಗಾಗಲೇ 2389 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದ್ದು, ಸಾಲಸೌಲಭ್ಯ ಒದಗಿಸಬೇಕು. ಹೊಸದಾಗಿ 909 ಜನರು ರ್ಜಿ ಸಲ್ಲಿಸಿದ್ದು, ಅವರಿಗೂ ಆಶ್ರಯ ಸಮಿತಿ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ ಎಂದು ಡಿಸಿ ತಿಳಿಸಿದರು.

    ಜೀವನೋಪಾಯ ಕೇಂದ್ರ ಸ್ಥಾಪಿಸುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಸೋಮಶೇಖರ ಬಂಕದ್ ಮಾಹಿತಿ ನೀಡಿದರು. ಶಾಸಕರಾದ ಜಿ.ಸೋಮಶೇಖರರೆಡ್ಡಿ, ಬಿ.ನಾಗೇಂದ್ರ, ಮಹಾನಗರ ಪಾಲಿಕೆ ಆಯುಕ್ತೆ ಪ್ರೀತಿ ಗೆಹ್ಲೋಟ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts