More

    ದೆಹಲಿ ರೈತರ ಹೋರಾಟ ಬೆಂಬಲಿಸಿ ಆರ್‌ಕೆಎಸ್‌ನಿಂದ ಸಹಿ ಸಂಗ್ರಹ ಚಳವಳಿ: ಬಳ್ಳಾರಿ ತಾಲೂಕಿನ ಕೋಳೂರಿನಲ್ಲಿ ಚಾಲನೆ

    ಬಳ್ಳಾರಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವ ಸಾವಿರಾರು ರೈತರ ಬೆಂಬಲಕ್ಕೆ ನಾವು ಸದಾಸಿದ್ಧ ಎಂದು ಆರ್‌ಕೆಎಸ್‌ನ ಜಿಲ್ಲಾ ಕಾರ್ಯದರ್ಶಿ ಇ.ಹನುಮಂತಪ್ಪ ಹೇಳಿದರು.

    ಕೋಳೂರು ಗ್ರಾಮದಲ್ಲಿ ರೈತ ಕೃಷಿಕಾರ್ಮಿಕ ಸಂಘಟನೆ (ಆರ್‌ಕೆಎಸ್)ಯಿಂದ ಅಖಿಲ ಭಾರತ ಪ್ರತಿರೋಧ ಸಪ್ತಾಹ ಅಂಗವಾಗಿ ಏರ್ಪಡಿಸಿರುವ ಏಳು ದಿನಗಳ ಸಹಿ ಸಂಗ್ರಹ ಚಳವಳಿಯಲ್ಲಿ ಭಾನುವಾರ ಮಾತನಾಡಿದರು. ಅಗತ್ಯ ವಸ್ತುಗಳ ಸರಕು ಸೇವಾ ಕಾಯ್ದೆ, ಎಪಿಎಂಸಿ ತಿದ್ದುಪಡಿ, ಗುತ್ತಿಗೆ ಕೃಷಿ ಕಾಯ್ದೆ ಹಾಗೂ ವಿದ್ಯುತ್ ಬಿಲ್‌ಗಳು ಸಂಪೂರ್ಣವಾಗಿ ರೈತ ವಿರೋಧಿಯಾಗಿವೆ. ಹೊಸ ಕಾಯ್ದೆಗಳನ್ನು ವಿರೋಧಿಸಿ ಸಾವಿರಾರು ರೈತರು ದೆಹಲಿಯ ವಿವಿಧ ಗಡಿಗಳಲ್ಲಿ 7 ತಿಂಗಳಿಂದ ಹೋರಾಟ ನಡೆಸುತ್ತಿದ್ದಾರೆ. ಆದರೆ, ಕೇಂದ್ರ ಸರ್ಕಾರ ಈವರೆಗೆ ಸ್ಪಂದಿಸಿಲ್ಲ. ಹೋರಾಟ ಹತ್ತಿಕ್ಕಲು ರೈತರ ಮೇಲೆ ವಿವಿಧ ರೀತಿಯ ದೌರ್ಜನ್ಯ ನಡೆಸಿತು. ಈ ಎಲ್ಲ ಆಕ್ರಮಣಗಳನ್ನು ರೈತರು ವಿಫಲಗೊಳಿಸಿ, ಧೃತಿಗೆಡದೆ ಧೈರ್ಯದಿಂದ ಪ್ರತಿಭಟನೆಯಲ್ಲಿ ನಿರತರಾಗಿದ್ದಾರೆ. ಈವರೆಗೆ 600 ಕ್ಕೂ ಹೆಚ್ಚು ರೈತರು ಹೋರಾಟದ ಸ್ಥಳದಲ್ಲೇ ಅಸುನೀಗಿದ್ದಾರೆ. ರೈತರ ಹೋರಾಟಕ್ಕೆ ಸಂಘದ ಸಂಪೂರ್ಣ ಬೆಂಬಲವಿದೆ ಎಂದರು.

    ಆರ್‌ಕೆಎಸ್‌ನ ಮುಖಂಡ ಗೋವಿಂದ ಮಾತನಾಡಿ, ತಾಲೂಕಿನ ವಿವಿಧ ಗ್ರಾಮಗಳಲ್ಲಿ ರೈತರ ಸಹಿ ಸಂಗ್ರಹಿಸಿ, ಜು.17ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಡಿಸಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts