More

    ಬಳ್ಳಾರಿ ಜಿಲ್ಲೆಯಲ್ಲಿ ಸದ್ಯಕ್ಕೆ ಲಾಕ್‌ಡೌನ್ ಇಲ್ಲ ; ಉಸ್ತುವಾರಿ ಸಚಿವ ಆನಂದ ಸಿಂಗ್ ಹೇಳಿಕೆ

    ಬಳ್ಳಾರಿ: ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಬಳ್ಳಾರಿ ಜಿಲ್ಲೆಯಲ್ಲಿ ಇನ್ನೂ 15 ದಿನ ಕರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುವ ವಿಚಾರದಲ್ಲಿ ಯಾವುದೇ ರೀತಿಯ ಸಮಸ್ಯೆ ಇಲ್ಲ ಎಂದು ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್ ತಿಳಿಸಿದರು.

    ನಗರದ ಜಿಪಂ ಸಭಾಂಗಣದಲ್ಲಿ ಶನಿವಾರ ಜಿಲ್ಲೆಯಲ್ಲಿ ಕರೊನಾ ಸ್ಥಿತಿಗತಿ ಮತ್ತು ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ ಸದ್ಯಕ್ಕೆ ಲಾಕ್‌ಡೌನ್ ಜಾರಿ ಮಾಡುವುದಿಲ್ಲ. ಲಾಕ್‌ಡೌನ್ ವಿಧಿಸಲಾಗಿರುವ ಜಿಲ್ಲೆಗಳಲ್ಲಿ ಸೋಂಕಿನ ತೀವ್ರತೆಯಲ್ಲಿ ಆಗಿರುವ ಬದಲಾವಣೆ ಪರಿಶೀಲಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ಈ ಕುರಿತು ಇನ್ನೂ ಒಂದು ವಾರ ಕಾದು ನೋಡಲಾಗುವುದು ಎಂದು ಹೇಳಿದರು.

    ಈಗಾಗಲೇ ಲಾಕ್‌ಡೌನ್ ವಿಧಿಸಿದಾಗ ಜನರ ಪಾಡು ದೇವರೇ ಬಲ್ಲ ಎನ್ನುವಂತಾಗಿತ್ತು. ನಿತ್ಯ ದುಡಿದು ಜೀವನ ನಿರ್ವಹಣೆ ಮಾಡುವವರನ್ನು ಸಂಕಷ್ಟಕ್ಕೆ ಗುರಿ ಮಾಡಬಾರದು ಎಂಬ ಕಾರಣಕ್ಕೆ ಲಾಕ್‌ಡೌನ್ ವಿಧಿಸದಿರಲು ತೀರ್ಮಾನಿಸಲಾಗಿದೆ. ಆಂಧ್ರಪ್ರದೇಶಕ್ಕೆ ಬಸ್ ಸಂಚಾರ ನಿರ್ಬಂಧಿಸುವ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ಜು.21ರಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ ಟ್ರಾಮಾಕೇರ್ ಕೇಂದ್ರ ಉದ್ಘಾಟಿಸಲಿದ್ದಾರೆ ಎಂದು ಸಚಿವ ಆನಂದ ಸಿಂಗ್ ತಿಳಿಸಿದರು.

    ಜಿಂದಾಲ್‌ನ ಎಲ್ಲ ಸಿಬ್ಬಂದಿ ಪರೀಕ್ಷಿಸಿ : ಜಿಂದಾಲ್‌ನಲ್ಲಿ ಇದುವರೆಗೆ ಕೇವಲ 5500 ಸಿಬ್ಬಂದಿಯನ್ನು ಕರೊನಾ ಪರೀಕ್ಷೆಗೆ ಒಳಪಡಿಸಿರುವುದಕ್ಕೆ ಸಚಿವ ಆನಂದ ಸಿಂಗ್ ಅತೃಪ್ತಿ ವ್ಯಕ್ತಪಡಿಸಿದರು. 10 ಸಾವಿರ ಆ್ಯಂಟಿಜೆನ್ ಕಿಟ್ ಖರೀದಿಸಿ ಜಿಂದಾಲ್‌ನಲ್ಲಿ ಪರೀಕ್ಷೆ ಪ್ರಮಾಣ ಹೆಚ್ಚಿಸಬೇಕು. ಎಲ್ಲ ಸಿಬ್ಬಂದಿಯನ್ನೂ ತಪಾಸಣೆಗೆ ಒಳಪಡಿಸಿ ಅಗತ್ಯ ಚಿಕಿತ್ಸೆ ಕೊಡಿಸಬೇಕು ಎಂದು ತಾಕೀತು ಮಾಡಿದರು. ಜಿಂದಾಲ್ ಸಂಸ್ಥೆಯ ಉಪಾಧ್ಯಕ್ಷ ಮಂಜುನಾಥ ಪ್ರಭು ಮಾತನಾಡಿ, ಜಿಂದಾಲ್‌ನಲ್ಲಿ ಕಾಯಿಲೆ ಇರುವವರನ್ನು ಗುರುತಿಸಿ ಮನೆಯಲ್ಲಿ ಇರುವುದಕ್ಕೆ ವ್ಯವಸ್ಥೆ ಮಾಡಲಾಗಿದೆ. ಪ್ರಸ್ತುತ 11 ಸಾವಿರ ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. ಟಾಟಾ ಸ್ಟೀಲ್ ಮಾದರಿಯಲ್ಲಿ ಸಿಬ್ಬಂದಿಯನ್ನು ನಾಲ್ಕು ವಿಭಾಗಗಳಲ್ಲಿ ವಿಂಗಡಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲ ಉದ್ಯೋಗಿಗಳನ್ನು ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts