More

    ಸರ್ಕಾರ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಒತ್ತಾಯಿಸಿ ಎಐಎಂಎಸ್‌ಎಸ್ ಪದಾಧಿಕಾರಿಗಳು ಮನವಿ

    ಬಳ್ಳಾರಿ: ದೆಹಲಿಯ ಸಿವಿಲ್ ಡಿಫೆನ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ರಾಬಿಯಾಳ ಹತ್ಯೆ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಆಗ್ರಹಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯ (ಎಐಎಂಎಸ್‌ಎಸ್) ಪದಾಧಿಕಾರಿಗಳು ನಗರದ ಡಿಸಿ ಕಚೇರಿ ಆವರಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

    ಸಂಘಟನೆಯ ಜಿಲ್ಲಾಧ್ಯಕ್ಷೆ ಎ.ಶಾಂತಾ ಮಾತನಾಡಿ, ರಾಜಧಾನಿ ದೆಹಲಿಯಲ್ಲಿ ಸಿವಿಲ್ ಡಿಫೆನ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ರಾಬಿಯಾಳ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಬರ್ಬರ ಹತ್ಯೆ ಖಂಡನೀಯ. ಬೇಟಿ ಬಚಾವೋ ಬೇಟಿ ಪಡಾವೋ ಎಂದು ಮಾತನಾಡುವ ಕೇಂದ್ರ ಸರ್ಕಾರ ನಿತ್ಯ ನಡೆಯುತ್ತಿರುವ ಮಹಿಳೆಯರ ಮತ್ತು ಮಕ್ಕಳ ಮೇಲಿನ ಅಪರಾಧಗಳ ಬಗ್ಗೆ ಅತೀವ ಮೌನ ತಾಳಿರುವುದು ಅತ್ಯಂತ ಸಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಸಿವಿಲ್ ಡಿಫೆನ್ಸ್‌ನಲ್ಲಿದ್ದವರ ಪರಿಸ್ಥಿತಿಯೇ ಹೀಗಾದರೆ, ಸಾಮಾನ್ಯ ಮಹಿಳೆ ಮತ್ತು ಮಕ್ಕಳ ಪರಿಸ್ಥಿತಿ ಇನ್ನೂ ಶೋಚನೀಯವಾಗಿದೆ. ಸರ್ಕಾರ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಮತ್ತು ಇಂತಹ ಹೇಯ್ಯ ಕೃತ್ಯದಲ್ಲಿ ತೊಡಗಿದವರಿಗೆ ನಿದರ್ಶನೀಯ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts