More

    ಸಾಗುವಳಿದಾರರಿಗೆ ಹಕ್ಕುಪತ್ರ ನೀಡಿ

    ಬಳ್ಳಾರಿ: ಕಂದಾಯ ಭೂಮಿ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡಲು ಆಗ್ರಹಿಸಿ ಅಖಿಲ ಭಾರತ ರೈತ ಕೃಷಿಕಾರ್ಮಿಕರ ಸಂಘಟನೆ(ಎಐಕೆಕೆಎಂಎಸ್)ವತಿಯಿಂದ ಇಲ್ಲಿನ ತಾಲೂಕು ಕಚೇರಿ ಮುಂಭಾಗ ಸೋಮವಾರ ಪ್ರತಿಭಟನೆ ನಡೆಸಲಾಯಿತು.

    ಜಿಲ್ಲಾಧ್ಯಕ್ಷ ಗೋವಿಂದ್ ಮಾತನಾಡಿ, ರಾಜ್ಯದಲ್ಲಿ 70-80 ವರ್ಷಗಳಿಂದ ಭೂ ಹಿನ ಮತ್ತು ಬಡ ರೈತ ಕೃಷಿಕಾರ್ಮಿಕರು ಕಂದಾಯ ಹಾಗೂ ಅರಣ್ಯದ ಕುರುಚಲು ಗಿಡ, ಕಲ್ಲು ಭೂಮಿ ಇರುವ ಪ್ರದೇಶದಲ್ಲಿ ತಮ್ಮ ಜೀವನೋಪಾಯಕ್ಕಾಗಿ ಸಾಗುವಳಿ ಮಾಡುತ್ತಿದ್ದಾರೆ. ಬಹುಪಾಲು ರೈತರಿಗೆ ಇದರಿಂದ ಬರುವ ಅಲ್ಪ ಸ್ವಲ್ಪ ವರಮಾನವೇ ಜೀವನಾಧಾರವಾಗಿದೆ. ಇಲ್ಲಿಯವರೆಗೆ ಎಲ್ಲ ಸರ್ಕಾರಗಳು ಸರ್ಕಾರಕ್ಕೆ ಸೇರಿದ ಜಮೀನಿನಲ್ಲಿ ಉಳುಮೆಗೆ ಅವಕಾಶ ಕೊಡುತ್ತಾ ಬಂದಿದೆ. ಆದರೆ, ಈವರರೆಗೆ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಲು ಅವಶ್ಯ ಕ್ರಮಕೈಗೊಂಡಿಲ್ಲ. ಶಾಸನ ಬದ್ಧವಾಗಿ ಭೂಮಿಯ ಹಕ್ಕು ದೊರೆಯದೆ ಇರುವುದರಿಂದ ಬಗರ್ ಹುಕುಂ ಸಾಗುವಳಿದಾರರು ಸಮಾಜದಲ್ಲಿನ ಇತರ ಜನರಂತೆ ನಿಶ್ಚಿತ ಬದುಕು ರೂಪಿಸಿಕೊಳ್ಳಲಾಗುತ್ತಿಲ್ಲ. ಅಲ್ಲದೆ, ದಶಕಗಳಿಂದ ತೀವ್ರ ಮಾನಸಿಕ ತೋಳಲಾಟದಲ್ಲಿ ಜರ್ಜರಿತರಾಗಿದ್ದಾರೆ. ಸರ್ಕಾರ ಹಕ್ಕುಪತ್ರ ಕೊಡದೆ ಇರುವುದರಿಂದ ಕೃಷಿ ಬೆಳೆ ಸಾಲ, ಕೃಷಿ ಪರಿಕರಗಳ ಮೇಲಿನ ಸಾಲ ಹಾಗೂ ಜೀವನೋಪಾಯಕ್ಕಾಗಿ ಸಹಕಾರಿ ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಸಾಲ ನೀಡುತ್ತಿಲ್ಲ. ಹೀಗಾಗಿ, ಕೂಡಲೇ ಹಕ್ಕುಪತ್ರ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿದರು.

    ಜಿಲ್ಲಾ ಕಾರ್ಯದರ್ಶಿ ಗುರಳ್ಳಿರಾಜ, ಸದಸ್ಯರಾದ ಇ.ಹನುಮಂತಪ್ಪ, ಈರಣ್ಣ, ಲಿಂಗಪ್ಪ, ಕೊಂಡಯ್ಯ ನಾಯ್ಡು, ಸಿದ್ದಲಿಂಗ ಮತ್ತು ರೈತರಾದ ವೀರೇಶ್, ಹೊನ್ನೂರಪ್ಪ, ಹುಲಿಗೆಮ್ಮ, ಡಿ.ಮಲ್ಲಿ, ಲಕ್ಷ್ಮಣ, ಮಾರೆಣ್ಣ, ಶ್ರೀನಿವಾಸ್ ನಾಯಕ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts